
ಬೆಂಗಳೂರು(ಅ.03): ರೈಲು ಹಳಿ ಮೇಲೆ ನಿಂತು ಸೆಲ್ಫೀ ತಗೆಸಿಕೊಳ್ಳುವ ಭರದಲ್ಲಿ ಹಿಂಬದಿಯಲ್ಲಿ ಬರುತ್ತಿದ್ದ ರೈಲನ್ನೂ ಗಮನಿಸದೆ ಮೂವರು ಯುವಕರು ಪ್ರಾಣ ಕಳೆದುಕೊಂಡ ಧಾರುಣ ಘಟನೆ ರಾಮನಗರದಲ್ಲಿ ನಡೆದಿದೆ.
ರಾಮನಗರ ತಾಲೂಕು ಮಂಚನಾಯಕನಹಳ್ಳಿ ಬಳಿಯ ವಂಡರ್ ಲಾ ಗೇಟ್ ಸಮೀಪದ ರೈಲ್ವೆ ಅಂಡರ್‍ಪಾಸ್‍ನಲ್ಲಿ ರೈಲು ಹಳಿ ಮೇಲೆ ನಿಂತು ಮೂವರು ಮೊಬೈಲ್‍ನಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ರೈಲನ್ನು ಗಮನಿಸದಿರುವುದೇ ಇವರ ಪ್ರಾಣಕ್ಕೆ ಕುತ್ತಾಗಿದೆ. ಮೂವರ ಮೃತದೇಹಗಳು ಗುರುತು ಸಿಗಲಾರದಷ್ಟು ಛಿದ್ರ ಛಿದ್ರವಾಗಿವೆ. ಇನ್ನು ಸ್ಥಳದಲ್ಲಿ ಸಿಕ್ಕ ದಾಖಲೆಗಳಿಂದ ಮೃತರಲ್ಲಿ ಇಬ್ಬರು ಜಯನಗರದ ನ್ಯಾಷನಲ್ ಕಾಲೇಜಿನ ವಿದ್ಯಾರ್ಥಿಗಳೆಂದು ತಿಳಿದು ಬಂದಿದೆ.
ಬಿಡದಿ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.