ಸರ್ಕಾರದ ಕಾರ್ಯಕ್ರಮಗಳಿಗೆ, ಜನಪರ ಆಡಳಿತಕ್ಕೆ ಸಂದ ಜಯ: ಸಿದ್ದರಾಮಯ್ಯ

Published : Apr 13, 2017, 03:45 AM ISTUpdated : Apr 11, 2018, 12:50 PM IST
ಸರ್ಕಾರದ ಕಾರ್ಯಕ್ರಮಗಳಿಗೆ, ಜನಪರ ಆಡಳಿತಕ್ಕೆ ಸಂದ ಜಯ: ಸಿದ್ದರಾಮಯ್ಯ

ಸಾರಾಂಶ

ಬೆಂಗಳೂರು (ಏ.13): ಉಪಚುನಾವಣೆ ಫಲಿತಾಂಶವು ಜನರಿಗೆ, ಜನಪರ ಆಡಳಿತಕ್ಕೆ ಸಂದ ಯಶಸ್ಸು. ಸರ್ಕಾರದ ಕಾರ್ಯಕ್ರಮಗಳಿಗೆ, ಪಕ್ಷದ ಸಂಘಟಿತ ಚುನಾವಣಾ ಹೋರಾಟಕ್ಕೆ ಸಿಕ್ಕ ಮನ್ನಣೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭಾ ಉಪಚುನಾವಣೆಯಲ್ಲಿ ಜಯಶೀಲರಾದ ಪಕ್ಷದ ಅಭ್ಯರ್ಥಿಗಳಾದ ಕಳಲೆ ಕೇಶವಮೂರ್ತಿ ಹಾಗೂ ಗೀತಾ ಮಹದೇವಪ್ರಸಾದ್ ಅವರಿಗೆ ಮುಖ್ಯಮಂತ್ರಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಉಪ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿದ ನಂಜನಗೂಡು ಮತ್ತು ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಮತದಾರರಿಗೂ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಜಾತಿ,ಧರ್ಮ,ಹಣ-ಇಂತಹ ಯಾವುದೇ ದೌರ್ಬಲ್ಯಕ್ಕೆ ಬಲಿಯಾಗದೆ ನಮ್ಮ ಸರ್ಕಾರದ ಸಾಧನೆ, ಪಕ್ಷದ ಸಿದ್ಧಾಂತ ಮತ್ತು ಅಭ್ಯರ್ಥಿಗಳ ಅರ್ಹತೆ ಗುರುತಿಸಿ ಗೆಲ್ಲಿಸಿದ ಮತದಾರರಿಗೆ ಶರಣು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!