
ಕೊಪ್ಪಳ (ಮಾ.19): ಬರ ಪರಿಹಾರದ ಕುರಿತು ಗ್ರಾಮೀಣಾಭಿವೃದ್ದಿ ಸಚಿವ ಎಚ್.ಕೆ.ಪಾಟೀಲ್ ಇಂದು ಕೊಪ್ಪಳದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ಮುಂಬರುವ ಎರಡು ತಿಂಗಳಲ್ಲಿ ಜನ ಸಾಮಾನ್ಯರಿಗೆ ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್, ಇತ್ತೀಚಿಗೆ ಸುವರ್ಣ ನ್ಯೂಸ್ ಸ್ಟುಡಿಯೋಗೆ ಹೋಗಿದ್ದ ಸಂದರ್ಭದಲ್ಲಿ ನನಗೆ ಹಿರೇಸಿಂದೋಗಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಆರಂಭವಾಗದಿರುವ ಕುರಿತು ಗಮನಕ್ಕೆ ತಂದರು. ಇದಾದ 48 ಗಂಟೆಯೊಳಗೆ ನೀರಿನ ಘಟಕ ಆರಂಭ ಮಾಡಲಾಯಿತು. ಹೀಗೆ ಎಲ್ಲಿಯಾದರೂ ಶುದ್ಧ ಕುಡಿಯುವ ನೀರಿನ ಘಟಕಗಳು ಸ್ಥಗಿತಗೊಂಡಿದ್ದರೆ ನನ್ನ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.