
ಅಮರಾವತಿ: ನೂತನ ರಾಜ್ಯ ರಚನೆಯ ಯೋಜನೆಗಳಿಗೆ ಕೇಂದ್ರ ಸೂಕ್ತ ಹಣಕಾಸು ನೆರವು ನೀಡುತ್ತಿಲ್ಲ ಎಂದು ಆರೋಪಿಸಿ, ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು, ಇದೀಗ ನೂತನ ರಾಜಧಾನಿ ಅಮರಾವತಿ ನಿರ್ಮಾಣಕ್ಕೆ ಕ್ರೌಡ್‌ಫಂಡಿಂಗ್ ಯೋಜನೆ ಅನುಸರಿಸಲು ಚಿಂತಿಸಿದ್ದಾರೆ.
ಅದಕ್ಕಾಗಿ ಈಗ ಅವರು ಸ್ವದೇಶ ಹಾಗೂ ವಿದೇಶದಲ್ಲಿರುವ ಅಂತರ್ಜಾಲತಾಣಿಗರ ಮೊರೆ ಹೋಗಿದ್ದಾರೆ. ಇದೀಗ ಸರ್ಕಾರಿ ಬಾಂಡ್‌ಗಳ ಆಧಾರದಲ್ಲಿ ಅಮರಾವತಿಯಲ್ಲಿ ಹೂಡಿಕೆ ಮಾಡುವಂತೆ ಸಾರ್ವಜನಿಕರನ್ನು ಕೋರುವ ಬಗ್ಗೆ ಅವರು ತಮ್ಮ ಪಕ್ಷದ ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ತಮ್ಮ ಹೂಡಿಕೆಗೆ ವಾಣಿಜ್ಯ ಬ್ಯಾಂಕ್‌ಗಳಿಗಿಂತ ಹೆಚ್ಚಿನ ಬಡ್ಡಿದರವನ್ನು ನೀಡುವ ಪ್ರಸ್ತಾಪ ಅವರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.