
ವೆಲ್ಲೂರು: ಲೆನಿನ್ ಪ್ರತಿಮೆ ಬಳಿಕ ಮುಂದಿನ ಸರದಿ ಪೆರಿಯಾರ್ ಅವರದ್ದು ಎಂಬ ಬಿಜೆಪಿ ನಾಯಕ ಎಚ್.ರಾಜಾ ಅವರ ಹೇಳಿಕೆ ಬೆನ್ನಲ್ಲೇ, ಮಂಗಳವಾರ ತಮಿಳುನಾಡಿನ ವೆಲ್ಲೂರಿನಲ್ಲಿ ದ್ರಾವಿಡ ಹೋರಾಟಗಾರ ಪೆರಿಯಾರ್ ಅವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ.
ಈ ವೇಳೆ ಬಿಜೆಪಿ ಮತ್ತು ಸಿಪಿಐ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದ್ದು, ಕೆಲವರನ್ನು ಬಂಧಿಸಲಾಗಿದೆ. ತಮಿಳುನಾಡಿನಲ್ಲಿ ಭಾರೀ ಮನ್ನಣೆ ಹೊಂದಿರುವ ಪೆರಿಯಾರ್ ಅವರ ಪ್ರತಿಮೆಗೆ ಹಾನಿ ಮಾಡಿರುವ ಘಟನೆ ರಾಜ್ಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.
ಘಟನೆ ಮಕ್ಕಳ್ ನೀಧಿ ಮಯ್ಯಂ ಪಕ್ಷದ ನಾಯಕ ಕಮಲ್‌ಹಾನಸ್ ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.