
ತುಮಕೂರು(ಫೆ.20): ಹೆಗಲ ಮೇಲೆ ತನ್ನ ಪತ್ನಿಯ ಶವವನ್ನು ಸಾಗಿಸಿದ್ದ ಒಡಿಸ್ಸಾ ಮಾದರಿಯ ಪ್ರಕರಣವೊಂದು ನಮ್ಮ ರಾಜ್ಯದಲ್ಲಿಯೂ ನಡೆದಿದೆ. ಅದೂ ಇಬ್ಬರು ಪ್ರಭಾವಿ ಸಚಿವರ ತವರು ಜಿಲ್ಲೆ, ದಕ್ಷ ಹಾಗೂ ಅಭಿವೃದ್ದಿ ಪರ ಶಾಸಕ ಎಂಬ ಹೆಸರು ಪಡೆದಿರುವ ಕೆ.ಎನ್ ರಾಜಣ್ಣ ಅವರ ಕ್ಷೇತ್ರದಲ್ಲಿಯೇ ನಡೆದಿದೆ.
ಪ್ರಾಥಮಿಕ ಆರೋಗ್ಯಕೇಂದ್ರದಲ್ಲಿ ಆಂಬುಲೆನ್ಸ್ ಇಲ್ಲದ ಕಾರಣ, ಬಡ ಕೂಲಿ ಕಾರ್ಮಿಕನೊಬ್ಬ ತನ್ನ ಮಗಳ ಮೃತದೇಹವನ್ನು ಟಿವಿಎಸ್ ನಲ್ಲಿ ಸಾಗಿಸಿದ್ದಾನೆ. ತಿಮ್ಮಪ್ಪ ಎಂಬ ವ್ಯಕ್ತಿ ತನ್ನ ಮಗಳು 20 ವರ್ಷದ ರತ್ನಮ್ಮ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಳು. ಅವಳನ್ನು ಮಧುಗಿರಿ ತಾಲ್ಲೂಕಿನ ಕೊಡುಗೇನಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ. ಆದರೆ ಅಲ್ಲಿ ವೈದ್ಯರೂ ಸಹ ಇಲ್ಲದ ಕಾರಣ ಆಕೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.
ತನ್ನ ಗ್ರಾಮ ವೀರಾಪುರಕ್ಕೆ ಮಗಳ ಮೃತದೇಹ ಸಾಗಿಸಲು ಆಂಬುಲೆನ್ಸ್ ಇಲ್ಲದ ಕಾರಣ, ಪರಿಚಯಸ್ಥರೊಬ್ಬರ ಸಹಾಯ ಪಡೆದು ಟಿವಿಎಸ್ ಬೈಕ್‍ನಲ್ಲಿಯೇ ಸಾಗಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.