
ಹರ್ಯಾಣ(ಸೆ.02): ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಡೇರಾ ಸಚ್ಚಾ ಸೌಧದ ಮುಖ್ಯಸ್ಥ ಬಾಬಾ ರಾಮ್ ರಹೀಂ ಸಿಂಗ್ ಪ್ರಕರಣದಲ್ಲಿ ಇದೀಗ ಹೊಸ ಸುದ್ದಿಯೊಂದು ಹರಿದಾಡ್ತಿದೆ.
ಸಿಬಿಐ ಕೋರ್ಟ್ನಿಂದ 20 ವರ್ಷ ಜೈಲು ಶಿಕ್ಷೆ ಗೆ ಗುರಿಯಾಗಿ, ಕಂಬಿ ಎಣಿಸುತ್ತಿರುವ ಬಾಬಾ ನಕಲಿಯಂತೆ. ನಿಜವಾದ ಬಾಬಾ ರಾಮ್ ರಹೀಂ ವಿದೇಶದಲ್ಲಿ ಹಾಯಾಗಿದ್ದಾನೆ. ಜೈಲಿನಲ್ಲಿರುವ ಬಾಬಾನನ್ನು ತದ್ರೂಪಿ ಸೃಷ್ಟಿ ಮಾಡಿ ಜೈಲಿಗೆ ಕಳುಹಿಸಲಾಗಿದೆ ಅಂತ ಖಾಸಗಿ ಸುದ್ದಿ ವಾಹಿನಿಯ ಸಂಪಾದಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಂಪಾದಕ ಇಂದು ಸಂಜೆ 7 ಗಂಟೆಗೆ ಇದರ ರಹಸ್ಯ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ. ಜೈಲಿನಲ್ಲಿರುವ ಬಾಬಾ ನಕಲಿಯೋ? ಅಥವಾ ಅಸಲಿಯೋ? ಎಂಬ ಬಗ್ಗೆ ಸಾಮಾಜಿಕ ಜಾಲ ತಾಣಗಳಲ್ಲಿ ಬಿಸಿಬಿಸಿ ಚರ್ಚೆ ಶುರುವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.