
ಮೈಸೂರು[ಮೇ.21]: ತನ್ನ ಮೈಮೇಲೆ ದೇವರು ಬರುತ್ತದೆ. ಮಕ್ಕಳಿಲ್ಲದ ಮಹಿಳೆಯರಿಗೆ ಮಕ್ಕಳಾಗುವಂತಹ ವರ ನೀಡುವೆ ಎಂದು ಹೇಳಿ ಮಹಿಳೆಯರನ್ನು ನಂಬಿಸಿ ವಂಚಿಸುತ್ತಿದ್ದ ಶನಿ ಮಹಾತ್ಮ ದೇವಸ್ಥಾನದ ಗುಡ್ಡಪ್ಪನನ್ನು ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಮೈಸೂರು ತಾಲೂಕು ಮಂಡನಹಳ್ಳಿಯಲ್ಲಿ ನಡೆದಿದೆ.
ನಂಜನಗೂಡು ತಾಲೂಕು ನೆಲ್ಲಿನಾಥಪುರದ ವೆಂಕಟೇಶ ನಾಯಕ(22) ಧರ್ಮದೇಟು ತಿಂದ ನಕಲಿ ಗುಡ್ಡಪ್ಪ. ವೆಂಕಟೇಶ್ ತನ್ನ ಮೈಮೇಲೆ ದೇವರು ಬರುತ್ತದೆ ಎಂದು ಹೇಳಿ ಅಮಾಯಕ ಮಹಿಳೆಯರನ್ನು ವಂಚಿಸುತ್ತಿದ್ದ ಎನ್ನಲಾಗಿದೆ. ಮಕ್ಕಳಿಲ್ಲದ ಮಹಿಳೆಯರಿಗೆ ಮಕ್ಕಳಾಗುವಂತಹ ವರ ನೀಡುತ್ತೇನೆ. ಇದಕ್ಕಾಗಿ ತನ್ನ ಜೊತೆ ಒಂದು ದಿನ ಧರ್ಮಸ್ಥಳಕ್ಕೆ ಬಂದು ಉಳಿದರೆ ಮಕ್ಕಳಾಗುತ್ತವೆ ಎಂದು ಆರೋಪಿಯು ಮಂಡನಹಳ್ಳಿಯ ಮಹಿಳೆಯೊಬ್ಬರಿಗೆ ನಂಬಿಸಿ ಮೋಸ ಮಾಡಲು ಮುಂದಾಗಿದ್ದ.
ಗುಡ್ಡಪ್ಪ ಮೋಸವನ್ನು ಬಯಲು ಮಾಡಲು ಮುಂದಾದ ಮಹಿಳೆಯು ಗುಡ್ಡಪ್ಪನನ್ನು ಮನೆಗೆ ಕರೆದಿದ್ದು, ಮಂಡನಹಳ್ಳಿಗೆ ಬಂದ ಗುಡ್ಡಪ್ಪನನ್ನು ಗ್ರಾಮಸ್ಥರು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಸಂಬಂಧ ಯಾರು ದೂರು ನೀಡಿಲ್ಲ. ಹೀಗಾಗಿ ಯಾವುದೇ ಪ್ರಕರಣ ದಾಖಲಿಸಿಲ್ಲ ಎಂದು ಜಯಪುರ ಠಾಣೆಯ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.