ರಾಜ್ಯದ ಬಿಜೆಪಿ ಶಾಸಕನಿಗೆ ಸಂಕಷ್ಟ ತಂದಿತೆ ಸುಳ್ಳು ಪ್ರಮಾಣ ಪತ್ರ?

Published : Jul 25, 2018, 09:42 PM IST
ರಾಜ್ಯದ ಬಿಜೆಪಿ ಶಾಸಕನಿಗೆ ಸಂಕಷ್ಟ ತಂದಿತೆ ಸುಳ್ಳು ಪ್ರಮಾಣ ಪತ್ರ?

ಸಾರಾಂಶ

ಸುಳ್ಳು ಪ್ರಮಾಣ ಪತ್ರ ನೀಡಿದ ಶಾಸಕರು ಇದೀಗ ಅನರ್ಹತೆ ಭಯ ಎದುರಿಸುವಂತಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ಸ್ಪಷ್ಟನೆ ಕೋರಿ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು[ಜು.25]  ಜಗಳೂರು ಬಿಜೆಪಿ ಶಾಸಕ ಎಸ್.ವಿ.ರಾಮಚಂದ್ರಗೆ ನೋಟಿಸ್ ನೀಡಲಾಗಿದೆ. ಎಸ್.ವಿ.ರಾಮಚಂದ್ರ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ 11 ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ.

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಚುನಾವಣೆ ಸ್ಪರ್ಧೆ ಸಲ್ಲಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಚ್.ವಿ ರಾಜೇಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಜಗಳೂರು ವಿಧಾನಸಭಾ ಕ್ಷೇತ್ರ ಪರಿಶಿಷ್ಟ ಪಂಗಡ ‌ಮೀಸಲು. ರಾಮಚಂದ್ರ ಹಿಂದುಳಿದ ವರ್ಗಕ್ಕೆ ಸೇರಿ‌ ಮರಾಠ ಸಮುದಾಯಕ್ಕೆ ಸೇರಿದ್ದಾರೆ. ಮರಾಠ ಸಮುದಾಯ ಹಿಂದುಳಿದ ವರ್ಗಕ್ಕೆ ಸೇರಿದೆ. ಹಾಗಾಗಿ ಎಸ್.ವಿ. ರಾಮಚಂದ್ರ ಶಾಸಕಕತ್ವ ಸ್ಥಾನವನ್ನು ರದ್ದುಗೊಳಿಸಬೇಕು. ಎರಡನೇ ಹೆಚ್ಚು ಮತ ಪಡೆದಿರುವ ಅಭ್ಯರ್ಥಿಯನ್ನು ಶಾಸಕ ಎಂದು ಘೋಷಿಸಬೇಕು ಎಂದು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆಯನ್ನು ಆ.20 ಕ್ಕೆ ಮುಂದೂಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

AI4Agri 2026: ಭಾರತದ ಮುಂದಿನ ಕೃಷಿ ಕ್ರಾಂತಿಗೆ AI ಸಾಥ್: ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದೇನು?
Imran Masood: ಮೋದಿಗೆ ಟ್ರಂಪ್ ಅಂದ್ರೆ ಭಯ, ತಮ್ಮವರ ಮೇಲೆಯೇ ದಾಳಿ: ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಕಿಡಿ