
ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮತ್ತು ಪೆಟ್ರೋಲ್ ಬೆಲೆ ಮೂರೂವರೆ ವರ್ಷಗಳ ಗರಿಷ್ಠ ಮಟ್ಟ ತಲುಪಿದೆ.
ಡೀಸೆಲ್ ಬೆಲೆ 61.74 ರು.ಗೆ ಹೆಚ್ಚಳ ಕಂಡಿದೆ. ದೇಶದ ನಾಲ್ಕು ಮಹಾನಗರಗಳ ಪೈಕಿ ದೆಹಲಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇದೆ. ಮುಂಬೈನಲ್ಲಿ ಸ್ಥಳೀಯ ತೆರಿಗೆ ಹಾಗೂ ವ್ಯಾಟ್ ಹೇರಿಕೆಯಾಗುವುದರಿಂದ ಲೀಟರ್ ಡೀಸೆಲ್ ಬೆಲೆ 65.74 ರು.ಗೆ ಜಿಗಿದಿದೆ. ಸೋಮವಾರ ಲೀಟರ್ ಪೆಟ್ರೋಲ್ ಬೆಲೆ 71.18 ಲೀಟರ್‌ಗೆ ಏರಿಕೆ ಯಾಗಿದೆ.
2014ರ ಆಗಸ್ಟ್ ನಂತರ ಪೆಟ್ರೋಲ್ ಈ ಮಟ್ಟ ಮುಟ್ಟಿರುವುದು ಇದೇ ಮೊದಲು. ಈ ಬೆಳವಣಿಗೆ ಬೆನ್ನಲ್ಲೇ ತೈಲೋತ್ಪನ್ನಗಳ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿ, ಜನಸಾಮಾನ್ಯರ ಮೇಲಿನ ಹೊರೆ ತಗ್ಗಿಸಬೇಕು ಎಂಬ ಬೇಡಿಕೆ ತೀವ್ರವಾಗತೊಡಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.