ಕರ್ನಾಟಕದಲ್ಲಿಯೂ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ?

By Web DeskFirst Published Sep 10, 2018, 10:42 AM IST
Highlights

ಕಾಂಗ್ರೆಸ್ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ದರ ಇಳಿಕೆಗೆ ಪಕ್ಷ ಮುಂದಾಗಿದೆ. ಕರ್ನಾಟಕ ಹಾಗೂ ಪಂಜಾಬ್ ಮುಖ್ಯಮಂತ್ರಿ ಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಇಳಿಕೆ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ.

ಶಿಮ್ಲಾ: ಪೆಟ್ರೋಲ್,  ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಭಾರತ ಬಂದ್‌ಗೆ ನಡೆಸಲಾಗುತ್ತಿದೆ.  ಇದೇ ನಿಟ್ಟಿನಲ್ಲಿ ಕಾಂಗ್ರೆಸ್ ಆಳ್ವಿಕೆಯಲ್ಲಿರುವ ರಾಜ್ಯಗಳಲ್ಲಿ ದರ ಇಳಿಕೆಗೆ ಪಕ್ಷ ಮುಂದಾಗಿದೆ. ಕರ್ನಾಟಕ ಹಾಗೂ ಪಂಜಾಬ್ ಮುಖ್ಯಮಂತ್ರಿ ಗಳಿಗೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ವ್ಯಾಟ್ ಇಳಿಕೆ ಮಾಡುವಂತೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಹಿಮಾಚಲ ಪ್ರದೇಶದ ಕಾಂಗ್ರೆಸ್ ಉಸ್ತುವಾರಿ ರಜನಿ ಪಾಟೀಲ್ ತಿಳಿಸಿದ್ದಾರೆ. 

ಹೀಗಾಗಿ ಕರ್ನಾಟಕ ದಲ್ಲಿ ಪೆಟ್ರೋಲ್ ಬೆಲೆ ಇಳಿಯುತ್ತಾ ಎಂಬ ಕುತೂಹಲ ಗರಿಗೆದರಿದೆ. ಹಿಮಾಚಲಪ್ರದೇಶದಲ್ಲಿ ಕಾಂಗ್ರೆಸ್ಸಿನ ವೀರಭದ್ರ ಸಿಂಗ್ ಅವರು ಮುಖ್ಯಮಂತ್ರಿ ಯಾಗಿದ್ದಾಗಲೇ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಶೇ. 2ರಷ್ಟು ತೆರಿಗೆಯನ್ನು ಕಡಿತ ಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಕಳೆದ ಜುಲೈನಲ್ಲಿ ಕರ್ನಾಟಕ ಬಜೆಟ್ ಮಂಡನೆ ಮಾಡಿದ್ದ ಎಚ್.ಡಿ. ಕುಮಾರಸ್ವಾಮಿ, ಲೀಟರ್ ಡೀಸೆಲ್ ಮೇಲಿನ ತೆರಿಗೆಯನ್ನು 1.14 ರು. ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 1.12 ರು.ನಷ್ಟು ಏರಿಕೆ ಮಾಡಿದ್ದರು. ಕಳೆದ ವಾರ ಸುದ್ದಿಗಾರರ ಜತೆ ಮಾತನಾಡಿದ್ದ ಅವರು, ತೈಲ ಬೆಲೆ ಇಳಿಕೆ ಕುರಿತು ಪರಿಶೀಲಿಸುವುದಾಗಿ ತಿಳಿಸಿದ್ದರು. ಹೀಗಾಗಿ ಪೆಟ್ರೋಲ್- ಡೀಸೆಲ್ ಬೆಲೆ ಇಳಿಯುತ್ತಾ ಎಂಬ ಕುತೂಹಲ ಮೂಡಿದೆ.

click me!