ಗುಡ್ ನ್ಯೂಸ್ : ಎಷ್ಟೊಂದು ಇಳಿಯಿತು ಪೆಟ್ರೋಲ್, ಡೀಸೆಲ್ ದರ

By Web DeskFirst Published Nov 17, 2018, 12:27 PM IST
Highlights

ದೇಶದಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆಯಾಗಿದೆ. ಭರ್ಜರಿ ಇಳಿಕೆಯಿಂದ ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿದೆ. 

ನವದೆಹಲಿ :  ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಕಡಿಮೆಯಾದ ಹಿನ್ನೆಲೆಯಲ್ಲಿ ದೇಶದಲ್ಲಿ ಮತ್ತೆ ಪೆಟ್ರೋಲ್ ಡೀಸೆಲ್ ದರ ಇಳಿಕೆಯಾಗಿದೆ. 

ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 19 ಪೈಸೆ ಹಾಗೂ ಡೀಸೆಲ್ ದರದಲ್ಲಿ 20 ಪೈಸೆಯಷ್ಟು ಇಳಿದಿದೆ. 

ಇದರಿಂದ ಪ್ರತೀ ಲೀಟರ್ ಪೆಟ್ರೋಲ್ ಬೆಲೆ ದಿಲ್ಲಿಯಲ್ಲಿ 76.91 ರು.ಗಳಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 71.74 ರು.ಗಳಷ್ಟಾಗಿದೆ.  

ಇನ್ನು ವಾಣಿಜ್ಯ ನಗರಿ ಮುಂಬೈನಲ್ಲಿಯೂ ಕೂಡ ತೈಲ ದರದಲ್ಲಿ ಇಳಿಕೆ ಕಂಡು ಬಂದಿದ್ದು ಪ್ರತೀ ಲೀಟರ್ ಪೆಟ್ರೋಲ್ ದರ 82.43ರು. ಹಾಗೂ ಡೀಸೆಲ್ ದರ 75.16 ರು.ಗಳಾಗಿದೆ.

ದೇಶದಲ್ಲಿ ಕೆಲವು ದಿನಗಳಲ್ಲಿ ನಿರಂತರವಾಗಿ ಪೆಟ್ರೋಲ್, ಡೀಸೆಲ್ ದರವು ಕುಸಿಯುತ್ತಿರುವುದು ಗ್ರಾಹಕರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

click me!