
ಬೆಂಗಳೂರು: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ದಿನದಿಂದ ದಿನಕ್ಕೆ ಗಗನಮುಖಿ ಆಗುತ್ತಲೇ ಇದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ 80 ರೂ. ಆಸುಪಾಸಿನಲ್ಲಿದ್ದ ತೈಲ ಬೆಲೆ ಇಂದು ಬೆಂಗಳೂರಲ್ಲಿಯೂ 80 ರೂ. ಗಡಿ ದಾಟುವ ಹಂತದಲ್ಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ತೈಲ ದರೆ ಏರಿಕೆ ಕಾಣಲು ಆರಂಭಿಸಿದ್ದು, ನಿರಂತವಾಗಿ ಏರುತ್ತಲೇ ಇದೆ. ದಿನೇ ದಿನೇ ಏರುತ್ತಿರುವ ಪೆಟ್ರೋಲ್ ದರ ಕಂಡು ವಾಹನ ಸವಾರರು ಕಂಗಾಲಾಗಿದ್ದಾರೆ.
ಬೆಂಗಳೂರಲ್ಲಿ ಮೇ 28ರಂದು ಪ್ರತೀ ಲೀಟರ್ ಪೆಟ್ರೋಲ್ ಗೆ 79 ರೂಪಾಯಿ 55 ಪೈಸೆ ಆದರೆ, ಪ್ರತೀ ಲೀಟರ್ ಡೀಸೆಲ್ ದರ 73 ರೂಪಾಯಿ 42 ಪೈಸೆ ಆಗಿದೆ. ಮೇ 15ರಂದು ಪ್ರತೀ ಲೀಟರ್ ಪೆಟ್ರೋಲ್ ದರ 76 ರೂಪಾಯಿ 16 ಪೈಸೆ ಇದ್ದರೆ, ಮೇ 20ರಂದು ಪ್ರತೀ ಲೀಟರ್ ಪೆಟ್ರೋಲ್ ದರ 77 ರೂಪಾಯಿ 48 ಪೈಸೆ ಇತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರುತ್ತಲೇ ಇದ್ದು, 15 ದಿನಗಳಿಂದ ಏರುತ್ತಿರುವ ತೈಲ ಬೆಲೆ ತಡೆಗೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ತೈಲ ರಫ್ತು ಮಾಡುವ ದೇಶಗಳಲ್ಲಿ ಕುಸಿದ ತೈಲ ಉತ್ಪಾದನೆ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾದ ಕಾರಣ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ ಕಾಣುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.