
ಬೆಂಗಳೂರು (ಅ.15): ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಎಂಬ ಅತಿರೇಕಿ ಮುಸ್ಲಿಂ ಸಂಘಟನೆಯನ್ನ ನಿಷೇಧಿಸಬೇಕು ಅನ್ನೋ ಒತ್ತಾಯ ಹಲವು ವರ್ಷಗಳಿಂದಲೂ ಕೇಳಿ ಬರುತ್ತಲೇ ಇದೆ. ಭಯೋತ್ಪಾದನೆ, ಲವ್ ಜಿಹಾದ್ನಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಈ ಸಂಘಟನೆಯನ್ನ ನಿಷೇಧಿಸಬೇಕು ಎಂದು ರಾಷ್ಟ್ರೀಯ ತನಿಖಾದಳ ಕೇಂದ್ರ ಗೃಹ ಸಚಿವಾಲಯಕ್ಕೆ ಶಿಫಾರಸು ಮಾಡಿದೆ. ಇಂತಹ ಸಂಘಟನೆ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ನಡೆಸುತ್ತಿದೆ. ‘ನಮಗೂ ಹೇಳಲಿಕ್ಕಿದೆ’ ಎಂಬ ಹೆಸರಿನಲ್ಲಿ ನಡೆಸುತ್ತಿರುವ ಸಮಾವೇಶದ ವೇದಿಕೆಗೆ ಇತ್ತೀಚೆಗೆ ಹತ್ಯೆಯಾದ ಪರ್ತಕರ್ತೆ ಗೌರಿ ಲಂಕೇಶ್ ಹೆಸರಿಡಲಾಗಿದೆ.
ಮೂಲಭೂತವಾದಿ ಸಂಘಟನೆ ಅನ್ನೋ ಹೆಸರು ಅಂಟಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ತಾನು ಪ್ರಗತಿಪರ ಎಂದು ಬಿಂಬಿಸಿಕೊಳ್ಳಲು ಗೌರಿ ಲಂಕೇಶ್ ಹೆಸರನ್ನು ಸಂಘಟನೆ ಬಳಸಿಕೊಳ್ಳುತ್ತಿದೆ ಎನ್ನಲಾಗುತ್ತಿದೆ. ಇನ್ನೂ ಸಮಾವೇಶದಲ್ಲಿ ಪಿಎಫ್ಐ ಮುಖಂಡರು ಪಿಎಫ್ಐ ರಾಜ್ಯಾಧ್ಯಕ್ಷ ಮೊಹಮ್ಮದ್ ಶಾಕೀರ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಕೆಮ್ಮಾರ್, ಮಾಜಿ ಸಚಿವೆ ಬಿ ಟಿ ಲಲಿತಾ ನಾಯಕ್, ಯೋಗೀಶ ಮಾಸ್ಟರ್, ಜ್ಞಾನಪ್ರಕಾಶ್ ಸ್ವಾಮೀಜಿ, ಸಿರಿಮನೆ ನಾಗರಾಜ್, ನಗರಕೆರೆ ರಮೇಶ್ ಸೇರಿ ಇತರರು ಭಾಗಿಯಾಗಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.