ಮರಳಿ ಜೆಡಿಎಸ್'ಗೆ ಬಂದ ಸಿಂಧ್ಯ: ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಗೌಡರು

Published : Oct 30, 2017, 03:08 PM ISTUpdated : Apr 11, 2018, 12:55 PM IST
ಮರಳಿ ಜೆಡಿಎಸ್'ಗೆ ಬಂದ ಸಿಂಧ್ಯ: ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಗೌಡರು

ಸಾರಾಂಶ

ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್‌ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

ಮೈಸೂರು(ಅ.30): ದಶಕಕ್ಕೂ ಹೆಚ್ಚು ಕಾಲ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದ ಹಿರಿಯ ರಾಜಕಾರಣಿ ಸಿಂಧ್ಯ ಸೋಮವಾರ ಮರಳಿ ಜೆಡಿಎಸ್‌ ಸೇರಲಿದ್ದಾರೆ. ಸಿದ್ದರಾಮಯ್ಯ ಶಕ್ತಿ ಕುಗ್ಗಿಸಲು ಸಿದ್ಧತೆ ನಡೆಸಿರುವ ಜೆಡಿಎಸ್ ವರಿಷ್ಠರು ಸಿಂಧ್ಯ ಅವರನ್ನು ವರುಣಾದಲ್ಲಿ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ಮೈಸೂರಿನ ವರುಣಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಪಿ.ಜಿ.ಆರ್. ಸಿಂಧ್ಯ ಕಣಕ್ಕಿಳಿಯುವ ಸಾಧ್ಯತೆ ಇದೆ.  ಹಾಲಿ ಪ್ರತಿನಿಧಿಸುವ ವರುಣಾ ಕ್ಷೇತ್ರವನ್ನು ತಮ್ಮ ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು, ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ತಯಾರಿ ನಡೆಸಿದ್ದಾರೆ. ವರುಣಾದಲ್ಲಿ ಒಕ್ಕಲಿಗರು, ಲಿಂಗಾಯಿತರು ಮತ್ತು ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಹೆಚ್ಚು. ಈ ಲೆಕ್ಕಾಚಾರದಲ್ಲಿ ಸಿಂಧ್ಯ ಅವರನ್ನು ಕಣಕ್ಕೆ ಇಳಿಸಿ, ಸಿದ್ದರಾಮಯ್ಯ ಅವರನ್ನು ಮೈಸೂರಿನಲ್ಲೇ ಕಟ್ಟಿ ಹಾಕುವ ಚಿಂತನೆ ಜೆಡಿಎಸ್‌ ವರಿಷ್ಠರದ್ದಾಗಿದೆ.

ನಿನ್ನೆ ಸಂಜೆ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ಸಿಂಧ್ಯ ಪಕ್ಷಕ್ಕೆ ಮರು ಸೇರ್ಪಡೆಯಾಗುವ ಕುರಿತು ಮಾತುಕತೆ ನಡೆಸಿದರು. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾತುಕತೆ ವೇಳೆ ವರುಣಾದಿಂದ ಸ್ಪರ್ಧಿಸುವ ಬಗ್ಗೆ ಪ್ರಾಸಂಗಿಕವಾಗಿ ಚರ್ಚೆ ನಡೆಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನ್ನನ್ನು ಯಾರೂ ಅಲುಗಾಡಿಸಲು ಆಗೋದಿಲ್ಲ : ಸಿಎಂ ಖಡಕ್‌ ನುಡಿ
ಮೋದಿ ಜತೆ ಪ್ರಿಯಾಂಕಾ ಗಾಂಧಿ ಆತ್ಮೀಯ ಮಾತು!