
ಬೆಂಗಳೂರು, [ಆ.31]: ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿಸಿದ್ದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಿಬಿಐ ಎಫ್ ಐಆರ್ ದಾಖಲಿಸಿಕೊಂಡಿದೆ.
ಮಾಹಿತಿ ತಂತ್ರಜ್ಞಾನ ಕಾಯ್ದೆ 22 ಮತ್ತು ಇಂಡಿಯನ್ ಟೆಲಿಗ್ರಾಫ್ ಕಾಯ್ದೆ 26 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 2018ರ ಆಗಸ್ಟ್ 1ರಿಂದ 2019ರ ಆಗಸ್ಟ್ 19ರವರೆಗೆ [ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಇದ್ದ ಸಮಯ] ತನಿಖೆ ನಡೆಯಲಿದೆ.
ಫೋನ್ ಟ್ಯಾಪಿಂಗ್: ಯಾರ‍್ಯಾರಿಗೆ ಸಿಬಿಐ ಉರುಳು? ಇಲ್ಲಿದೆ ಫುಲ್ ಡಿಟೇಲ್ಸ್
CBI ಎಸ್ ಪಿ ಕಿರಣ್.S ಅವರು ತನಿಖಾ ತಂಡವನ್ನು ರಚಿಸಿದ್ದು, ಸಿಬಿಐ DySp ಮುಖೇಶ್ ಕುಮಾರ್ ಅವರನ್ನು ತನಿಖಾಧಿಕಾರಿ ನೇಮಿಸಿದ್ದಾರೆ. ಸದ್ಯಕ್ಕೆ ಸಿಬಿಐ FIRನಲ್ಲಿ ಕುಮಾರಸ್ವಾಮಿ ಹೆಸರು ಇಲ್ಲ. ಅಪರಿಚಿತ ಜನಪ್ರತಿನಿಧಿಗಳು, ಪಬ್ಲಿಕ್ ಸರ್ವೆಂಟ್ಸ್, ಖಾಸಗಿ ವ್ಯಕ್ತಿಗಳು ಎಂದಷ್ಟೇ FIRನಲ್ಲಿ ಉಲ್ಲೇಖವಾಗಿದೆ.
ಇದು ರಾಜಕಾರಣಿಗಳಿಗೂ ಮತ್ತು ಅಧಿಕಾರಿಗಳಿಗೂ ಅನ್ವಯವಾಗಲಿದೆ. ಇದರಿಂದ ಕೆಲ ರಾಜಕಾರಣಿಗಳಿಗೆ ಹಾಗೂ ಅಧಿಕಾರಿಗಳಿಗೆ ಟೆನ್ಷನ್ ಶುರುವಾಗಿದೆ. ಅಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಪತನದ ಹಂತದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೆಲ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಸೇರಿದಂತೆ ಪೊಲೀಸ್ ಅಧಿಕಾರಿಗಳ ಪೋನ್ ಟ್ಯಾಪಿಂಗ್ ಮಾಡಿಸಿದ್ದಾರೆ ಎನ್ನುವ ಗಂಭೀರ ಆರೋಪಗಳು ಕೇಳಿಬಂದಿದೆ.
ಈ ಪ್ರಕರಣ ಸ್ವಲ್ಪ ದಿನ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿತ್ತು. ಈ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಈ ಕೇಸ್ ಅನ್ನು ಸಿಬಿಐಗೆ ವಹಿಸಿ ಆದೇಶ ಹೊರಡಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.