
ನವದೆಹಲಿ (ನ.11): ರೂ.500 ಹಾಗೂ ರೂ. 1000 ನೋಟುಗಳನ್ನು ನಿಷೇಧಿಸಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್’ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ನೋಟು ನಿಷೇಧಿಸುವ ಸರ್ಕಾರದ ಕ್ರಮವು ದೇಶದ ಜನರ ಜೀವನ ಹಾಗೂ ವ್ಯಾಪಾರ ನಡೆಸುವ ಸಾಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಸರ್ಕಾರದ ಕ್ರಮವು ಸರ್ವಾಧಿಕಾರಿ ಧೋರಣೆಯಾಗಿದೆ ಎಂದಿರುವ ಅರ್ಜಿದಾರರು, ಅನಿರೀಕ್ಷಿತವಾದ ನಿಷೇಧದಿಂದ ಜನಸಾಮಾನ್ಯರ ಜೀವನ ನಿರ್ವಹಣೆಗೆ ಮಾರಕವಾಗಿದೆ ಹಾಗೂ ದೊಡ್ಡ ಸಮಸ್ಯೆಗಳನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದ್ದಾರೆ.
ಸರ್ಕಾರ ನೋಟುಗಳನ್ನು ರದ್ದುಪಡಿಸುವ ಮುಂಚೆ ಒಂದೋ ಸಮಯಾವಕಾಶ ನೀಡಬೇಕು, ಅಥವಾ ನಿಷೇಧವನ್ನು ಹಿಂಪಡೆಯಬೇಕೆಂದು ಎಂದು ಅರ್ಜಿದಾರರು ಹೇಳಿದ್ದಾರೆ. ಸುಪ್ರೀಂ ಕೋರ್ಟ್ ಅರ್ಜಿಯನ್ನು ಈ ವಾರದಲ್ಲೇ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.