ದೇಶದಲ್ಲಿ ಎರಡು ಮಕ್ಕಳ ನೀತಿ ಜಾರಿ : ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ

By Suvarna Web DeskFirst Published Feb 14, 2018, 11:05 AM IST
Highlights

ದೇಶದೆಲ್ಲೆಡೆ ಒಂದು ಕುಟುಂಬಕ್ಕೆ ಎರಡು ಮಕ್ಕಳ ನೀತಿಯನ್ನು ಜಾರಿಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಸರ್ಕಾರ ಕುಟುಂಬ ಯೋಜನೆಯನ್ನು ಪ್ರಚಾರ ಮಾಡಬೇಕು ಮತ್ತು ಎರಡು ಮಕ್ಕಳನ್ನು ಮಾತ್ರ ಹೆರುವಂತೆ ದೇಶದ ಜನರನ್ನು ಪ್ರೇರೇಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ನವದೆಹಲಿ: ದೇಶದೆಲ್ಲೆಡೆ ಒಂದು ಕುಟುಂಬಕ್ಕೆ ಎರಡು ಮಕ್ಕಳ ನೀತಿಯನ್ನು ಜಾರಿಗೊಳಿಸಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ. ಸರ್ಕಾರ ಕುಟುಂಬ ಯೋಜನೆಯನ್ನು ಪ್ರಚಾರ ಮಾಡಬೇಕು ಮತ್ತು ಎರಡು ಮಕ್ಕಳನ್ನು ಮಾತ್ರ ಹೆರುವಂತೆ ದೇಶದ ಜನರನ್ನು ಪ್ರೇರೇಪಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಜನಸಂಖ್ಯೆ ಹೆಚ್ಚಳದಿಂದ ದೇಶದ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಅತಿಯಾದ ಒತ್ತಡ ಉಂಟಾಗತೊಡಗಿದೆ. ಅಲ್ಲದೇ ಜನಸಂಖ್ಯೆ ಹೆಚ್ಚಳ ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತಿದೆ. ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಿಂದ ಚೀನಾದಲ್ಲಿ ಒಂದು ಮಗುವಿನ ನೀತಿಯನ್ನು ಅಳವಡಿಸಿಕೊಂಡಿತ್ತು. ಅದರನ್ವಯ 2017ರಲ್ಲಿ ಚೀನಾದಲ್ಲಿ ಮಕ್ಕಳ ಜನನ ಪ್ರಮಾಣ ಕೇವಲ 630,000ಕ್ಕೆ ಇಳಿದಿದೆ ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಆಂಧ್ರಪ್ರದೇಶ, ಗುಜರಾತ್‌, ಮಹಾರಾಷ್ಟ್ರ, ಒಡಿಶಾ ಮತ್ತು ರಾಜಸ್ಥಾನಗಳಲ್ಲಿ ಕುಟುಂಬ ಯೋಜನೆಯನ್ನು ಹೆಚ್ಚಾಗಿ ಪ್ರಚಾರ ಮಾಡಬೇಕಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

 

click me!