
ನವದೆಹಲಿ, [ಜ.23]: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಹಣಕಾಸು ಖಾತೆಯನ್ನು ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರಿಗೆ ನೀಡಲಾಗಿದೆ.
ಕೇಂದ್ರ ಬಜೆಟ್‍ಗೆ ಕೆಲವೇ ದಿನಗಳು ಬಾಕಿ ಇದೆ. ಇದ್ರಿಂದ ಹಣಕಾಸು ಖಾತೆಯ ಜವಾಬ್ದಾರಿಯನ್ನ ಪಿಯೂಷ್ ಗೋಯಲ್ ಅವರಿಗೆ ವಹಿಸಲಾಗಿದೆ.
ಅರುಣ್ ಜೇಟ್ಲಿಗೆ ಕ್ಯಾನ್ಸರ್?: ಬಜೆಟ್ ಮಂಡನೆಗೂ ಅಲಭ್ಯ?
ಅನಾರೋಗ್ಯದಿಂದ ಬಳಲುತ್ತಿರುವ ಅಣಕಾಸು ಸಚಿವ ಅರುಣ್ ಜೇಟ್ಲಿ ಅವರು ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಿದ್ದಾರೆ. ಈ ಹಿನ್ನಲೆಯಲ್ಲಿ ಪಿಯೂಷ್ ಗೋಯಲ್ ಅವರಿಗೆ ಹೆಚ್ಚಿನ ಜವಾಬ್ದಾರಿ ವಹಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನ ಅಧಿಕೃತ ಮಾಹಿತಿಯನ್ನು ನೀಡಿದೆ.
100 ಪರ್ಸೆಂಟ್ ನಿಮ್ಮೊಂದಿಗಿದ್ದೇವೆ: ಜೇಟ್ಲಿಗೆ ಹಾರೈಸಿದ ರಾಹುಲ್!
ಪಿಯೂಷ್ ಗೋಯಲ್ ಅವರು ಹಂಗಾಮಿ ಹಣಕಾಸು ಸಚಿವ ಸ್ಥಾನ ವಹಿಸಿಕೊಂಡಿರುವುದರಿಂದ ಈ ಬಾರಿಯ ಕೇಂದ್ರ ಬಜೆಟ್ ಮಂಡಿಸುವ ಸಾಧ್ಯತೆಗಳಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ