
ಕೋಲಾರ, (ಸೆ.22): ಬಿಜೆಪಿ ಸರ್ಕಾರಕ್ಕಾಗಿ ಶಾಸಕ ಸ್ಥಾನವನ್ನೇ ತ್ಯಾಗ ಮಾಡಿರುವ ಅನರ್ಹ ಶಾಸಕರ ಪರ ಅಥವಾ ವಿರೋಧ ತೀರ್ಪು ಬಂದರೆ, ಬಿಜೆಪಿ ಬಳಿ ಎ ಮತ್ತು ಬಿ ಪ್ಲಾನ್ ರೆಡಿ ಇದೆ ಎಂದು ಹೇಳುವ ಮೂಲಕ ಕಂದಾಯ ಸಚಿವ ಆರ್. ಅಶೋಕ್ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಬಿಜೆಪಿ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಸೋಮವಾರ ಸುಪ್ರೀಂಕೋರ್ಟ್ ನೀಡುವ ತೀರ್ಪಿನ ಮೇಲೆ ಉಪಚುನಾವಣೆ ಭವಿಷ್ಯ ನಿಂತಿದೆ. ಅನರ್ಹ ಶಾಸಕರ ಪರ ಅಥವಾ ವಿರೋಧ ತೀರ್ಪು ಬಂದರೆ, ಬಿಜೆಪಿ ಬಳಿ ಎ ಮತ್ತು ಬಿ ಪ್ಲಾನ್ ರೆಡಿ ಇದೆ. ಹಿನ್ನೆಲೆಯಲ್ಲಿ ಸುಪ್ರೀಂ ತೀರ್ಪಿನ ಮೇಲೆ ಕರ್ನಾಟಕ ರಾಜಕೀಯದ ಚಿತ್ರಣ ಬದಲಾಗುತ್ತೆ ಎಂದ ಹೇಳಿದರು
ಬೈ ಎಲೆಕ್ಷನ್‌ಗೆ ಅನರ್ಹರು ಸ್ಪರ್ಧಿಸಲು ಅವಕಾಶ ಇದ್ಯಾ? ಇಲ್ಲ?: ಸಂಪೂರ್ಣ ಮಾಹಿತಿ
ಕಾಂಗ್ರೆಸ್, ಜೆಡಿಎಸ್ ಪಕ್ಷದ ಬಂಡಾಯ ಶಾಸಕರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಕ್ಷೇತ್ರಗಳಲ್ಲಿ ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿದರು.
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ರಾಜ್ಯದ 15 ವಿಧಾನಸಭೆ ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಗಳನ್ನು ಒಪ್ಪಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಮುಖಂಡರಿಗೆ ಟಿಕೆಟ್ ಕೊಟ್ಟಿದ್ದರೂ ಸೋತಿದ್ದರು. ಹೀಗಾಗಿ ಟಿಕೆಟ್ ನೀಡಿಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.