
ನವದೆಹಲಿ (ಡಿ.15): ಪ್ರತಿಷ್ಠಿತ ನಿಯತಕಾಲಿಕಗಳಲ್ಲೊಂದಾದ ಫೋರ್ಬ್ಸ್ ಮ್ಯಾಗಝಿನ್ ಜಗತ್ತಿನ 74 ಪ್ರಭಾವಶಾಲಿ ವ್ಯಕ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಪ್ರಧಾನಿ ಮೋದಿ ಹೆಸರು ಟಾಪ್ 10’ನಲ್ಲಿ ಕಾಣಿಸಿಕೊಂಡಿದೆ.
ರಷ್ಯಾ ಅಧ್ಯಕ್ಷ ವ್ಲಾದಿಮರ್ ಪುತಿನ್ ಈ ಬಾರಿಯೂ ಮೊದಲ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಫೋರ್ಬ್ಸ್ ಪ್ರಕಾರ ಕಳೆದ 4 ವರ್ಷಗಳಿಂದ ಪುಟಿನ್ ಜಗತ್ತಿನ ಅತ್ಯಂತ ಪ್ರಭಾವಶಾಲಿ ವ್ಯಕ್ತಿಯಾಗಿದ್ದಾರೆ.
ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಪ್ರಧಾನಿ ಮೋದಿ 9ನೇ ಸ್ಥಾನವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಪ್ರಧಾನಿ ಮೋದಿ ಜಾಗತಿಕ ಭೂಪಟದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರು ಬರಾಕ್ ಒಬಾಮಾ, ಶೀ ಜಿನ್’ಪಿಂಗ್ ಮುಂತಾದ ಜಾಗತಿಕ ನಾಯಕರ ಸಾಲಿನಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ.
ಅಮೆರಿಕಾ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಸ್ಥಾನದಲ್ಲಿದ್ದರೆ, ಜರ್ಮನ್ ಚಾನ್ಸೆಲ್ಲರ್ ಏಂಜೆಲಾ ಮರ್ಕೆಲ್ ಫೋರ್ಬ್ಸ್ ಪಟ್ಟಿಯ ಮೂರನೇ ಸ್ಥಾನದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.