ಸ್ವಾತಂತ್ರ್ಯ ದಿನದಂದು ದೇಶದ ಜನತೆಗೆ ಪ್ರಧಾನಿ ಭರ್ಜರಿ ಗಿಫ್ಟ್

By Web DeskFirst Published Aug 15, 2018, 8:52 AM IST
Highlights

ಸ್ವಾತಂತ್ರ್ಯ ದಿನದ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಭರ್ಜರಿ ಗಿಫ್ಟ್ ನೀಡಿದ್ದಾರೆ. 

ನವದೆಹಲಿ : ಇಂದು ದೇಶದಾದ್ಯಂತ ಸ್ವಾತಂತ್ರ್ಯ ದಿನವನ್ನು ಆಚರಣೆ ಮಾಡುತ್ತಿದ್ದು, ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ದೇಶದ ಜನತೆಗೆ ಗಿಫ್ಟ್ ನೀಡಿದ್ದಾರೆ. 

10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಒದಗಿಸುವ ಆಯುಷ್ಮಾನ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.  ವಿಶ್ವದ ಅತಿದೊಡ್ಡ ಯೋಜನೆ 'ಆಯುಷ್ಮಾನ್ ಭಾರತ್' ಯೋಜನೆಯಾಗಿದ್ದು, ಈ ಯೋಜನೆಯಡಿಯಲ್ಲಿ ಕುಟುಂಬವೊಂದಕ್ಕೆ ರೂ.5 ಲಕ್ಷ ಮೌಲ್ಯದ ಆರೋಗ್ಯ ವಿಮೆ ದೊರೆಯಲಿದೆ.

 "

"

ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಯೋಜನೆಯನ್ನು ಮೊದಲು ಜಾರಿ ಮಾಡಲಾಗುತ್ತಿದೆ. ಇದರಲ್ಲಿ 100 ಆಸ್ಪತ್ರೆಗಳಿದ್ದು, ಬಹುತೇಕ ಆಸ್ಪತ್ರೆಗಳು ಸರ್ಕಾರಿ ಆಸ್ಪತ್ರೆಗಳಾಗಿರುತ್ತವೆ.  ಮೊದಲಿಗೆ ಶಸ್ತ್ರಚಿಕಿತ್ಸೆ ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆ ಆರಂಭಿಸಲಾಗುತ್ತದೆ.  ಈ ಯೋಜನೆಯ ಅಡಿಯಲ್ಲಿ ದೇಶದ 11 ರಾಜ್ಯಗಳ 70-80 ಜಿಲ್ಲೆಗಳಲ್ಲಿ ಸೇವೆಗಳು ಲಭ್ಯವಾಗಲಿವೆ.

"

"

click me!