
ನವದೆಹಲಿ(ಜು.23): ಭಾರತದ ಎಲ್ಲಾ ಮಾಜಿ ಪ್ರಧಾನಮಂತ್ರಿಗಳ ಗೌರವ ಸೂಚಕವಾಗಿ, ಭವ್ಯವಾದ ವಸ್ತು ಸಂಗ್ರಹಾಲಯವನ್ನು ದೆಹಲಿಯಲ್ಲಿ ನಿರ್ಮಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ಬರೆದ ಮಾಜಿ ಪ್ರಧಾನಿ ಚಂದ್ರಶೇಖರ್ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ದೇಶಕ್ಕಾಗಿ ಸೇವೆ ಸಲ್ಲಿಸಿದ ಎಲ್ಲಾ ಮಾಜಿ ಪ್ರಧಾನಿಗಳಿಗಾಗಿ ವಸ್ತು ಸಂಗ್ರಹಾಲಯವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಇದೇ ವೇಳೆ ಕಾಂಗ್ರೆಸ್ ತನ್ನ ತಂತ್ರಗಾರಿಕೆಯ ಭಾಗವಾಗಿ ಕೆಲ ಪ್ರಧಾನಮಂತ್ರಿಗಳ ನೆನಪುಗಳನ್ನು ಅಳಿಸಲು ಪ್ರಯತ್ನಿಸಿದ್ದು, ತಾವು ಮಾತ್ರ ಎಲ್ಲಾ ಮಾಜಿ ಪ್ರಧಾನಿಗಳ ಸ್ಮರಣಾರ್ಥ ವಸ್ತು ಸಂಗ್ರಹಾಲಯ ತೆರಯುವುದಾಗಿ ಮೋದಿ ಹೇಳಿದರು.
ಮಾಜಿ ಪ್ರಧಾನಮಂತ್ರಿಗಳ ಕುಟುಂಬ ಸದಸ್ಯರು ಈ ವಸ್ತು ಸಂಗ್ರಹಾಲಯಕ್ಕೆ ಸಂಬಂಧಿಸಿದ ಎಲ್ಲ ವಿಷಯಗಳನ್ನು ಹಂಚಿಕೊಳ್ಳಬೇಕೆಂದು ಮೋದಿ ಈ ವೇಳೆ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.