ಶ್ರೀಲಂಕಾ ಬಂದಿಳಿದ ಮೋದಿ: ಈಸ್ಟರ್ ಹುತಾತ್ಮರಿಗೆ ನಮನ!

Published : Jun 09, 2019, 01:56 PM IST
ಶ್ರೀಲಂಕಾ ಬಂದಿಳಿದ ಮೋದಿ: ಈಸ್ಟರ್ ಹುತಾತ್ಮರಿಗೆ ನಮನ!

ಸಾರಾಂಶ

ಶ್ರೀಲಂಕಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ| ಈಸ್ಟರ್ ದಾಳಿ ಬಳಿಕ ದ್ವೀಪ ರಾಷ್ಟ್ರಕ್ಕೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕ| ಮೋದಿ ಅವರನ್ನು ಸ್ವಾಗತಿಸಿದ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ| ಈಸ್ಟರ್ ದಾಳಿಯಲ್ಲಿ ಮೃತಪಟ್ಟವರಿಗೆ ಮೋದಿ ನಮನ| ಬಾಂಬ್ ಸ್ಫೋಟ ನಡೆದ ಸ್ಥಳದಲ್ಲಿ ಶಾಂತಿಯ ಗಿಡ ನೆಟ್ಟ ಪ್ರಧಾನಿ| 

ಕೊಲಂಬೋ(ಜೂ.09): ಮಾಲ್ಡೀವ್ಸ್ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಇಂದು ಶ್ರೀಲಂಕಾಗೆ ಭೇಟಿ ನೀಡಿದ್ದಾರೆ. ಈ ಮೂಲಕ ಈಸ್ಟರ್ ಆತ್ಮಹತ್ಯಾ ಬಾಂಬ್ ದಾಳಿ ಬಳಿಕ ಶ್ರೀಲಂಕಾಗೆ ಭೇಟಿ ನೀಡಿದ ಮೊದಲ ವಿದೇಶಿ ನಾಯಕರಾಗಿದ್ದಾರೆ.

 ಶ್ರೀಲಂಕಾಗೆ ಬಂದಿಳಿದ ಮೋದಿಯವರನ್ನು ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅಭೂತಪೂರ್ವವಾಗಿ ಸ್ವಾಗತಿಸಿದರು. 

ಈ ವೇಳೆ ಕಳೆದ ಏಪ್ರಿಲ್‌ನಲ್ಲಿ ಈಸ್ಟರ್ ಸಂಡೆ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದರು. ಬಾಂಬ್ ಸ್ಫೋಟ ನಡೆದ ಸ್ಥಳಕ್ಕೆ ಹೋಗಿ ಅಲ್ಲಿ ಗಿಡ ನೆಟ್ಟು ಶಾಂತಿ, ಸೌಹಾರ್ದತೆಯ ಸಂದೇಶ ಸಾರಿದರು.

ಇನ್ನು ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ, ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ, ಶ್ರೀಲಂಕಾ ವಿಪಕ್ಷ ನಾಯಕರು ಮತ್ತು ತಮಿಳು ಸಂಘಟನೆಗಳ ನಿಯೋಗದೊಂದಿಗೆ ಮಾತುಕತೆ ನಡೆಸಲಿದ್ದಾರೆ. 

ಇನ್ನು ಮೋದಿ ಇಂದು ಇಂದು ಸಂಜೆ ಶ್ರೀಲಂಕಾದಿಂದ ನೇರವಾಗಿ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ದೆಹಲಿಗೆ ವಾಪಸ್ಸಾಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಟರ್ನೆಟ್ ಇಲ್ಲದೆಯೂ UPI ಪಾವತಿ ಮಾಡಬಹುದು, *99# ಮೂಲಕ ಹಣ ಕಳುಹಿಸುವುದು ಹೇಗೆ?
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್