ಮೋದಿ, ಜೇಟ್ಲಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಸ್ವಾಮಿ ಅಚ್ಚರಿ ಹೇಳಿಕೆ!

By Web DeskFirst Published Mar 24, 2019, 9:07 AM IST
Highlights

ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದ್ದರೂ 5ನೇ ಅತಿದೊಡ್ಡ ಆರ್ಥಿಕತೆ ಎಂದು ಹೇಳುತ್ತಿದ್ದಾರೆ| ಮೋದಿ, ಜೇಟ್ಲಿಗೆ ಅರ್ಥಶಾಸ್ತ್ರ ಗೊತ್ತಿಲ್ಲ: ಸ್ವಾಮಿ ಅಚ್ಚರಿ ಹೇಳಿಕೆ!

 

ಕೋಲ್ಕತಾ[ಮಾ.24]: ‘ಪ್ರಧಾನಿ ನರೇಂದ್ರ ಮೋದಿ ಅಥವಾ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಅರ್ಥಶಾಸ್ತ್ರದ ಬಗ್ಗೆ ಗೊತ್ತಿಲ್ಲ. ಭಾರತ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದ್ದರೂ 5ನೇ ಅತಿದೊಡ್ಡ ಆರ್ಥಿಕತೆ ಎಂದು ಹೇಳುತ್ತಿದ್ದಾರೆ’ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ಇಲ್ಲಿನ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಸ್ವಾಮಿ, ಜಿಡಿಪಿ ಲೆಕ್ಕಾಚಾರದಂತೆ ಅಮೆರಿಕ ಮತ್ತು ಚೀನಾ ಬಳಿಕ ಭಾರತ ಮೂರನೇ ದೊಡ್ಡ ಆರ್ಥಿಕತೆ ಎನಿಸಿಕೊಂಡಿದ್ದರೂ, ಮೋದಿ ಭಾರತವನ್ನು ವಿಶ್ವದ 5ನೇ ದೊಡ್ಡ ಆರ್ಥಿಕತೆ ಎಂದು ಏಕೆ ಕರೆಯುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಬಹುಶಃ ಮೋದಿ ಹಾಗೂ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರಿಗೆ ಅರ್ಥಶಾಸ್ತ್ರದ ಕುರಿತು ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.

ಖರೀದಿಸುವ ಸಾಮರ್ಥ್ಯದ ಮೇಲೆ ಆರ್ಥಿಕತೆಯ ಗಾತ್ರವನ್ನು ಲೆಕ್ಕಹಾಕುವುದು ಸರಿಯಾದ ವಿಧಾನ ಎಂದು ಹೇಳಿದರು.

click me!