
ಚತ್ತೀಸ್ ಗಢ : ದೇಶದ ಪಂಚ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದ್ದು ಸದ್ಯ ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ.
ಇದೇ ವೇಳೆ ಚತ್ತೀಸ್ ಗಢದಲ್ಲಿ ಚುನಾವಣೆ ನಡೆಯುತ್ತಿದ್ದು,ಈ ನಿಟ್ಟಿನಲ್ಲಿ ಚುನಾವಣಾ ರ್ಯಾಲಿಯೊಂದನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಲ್ಲಿ ಗಾಂಧಿ ಕುಟುಂಬವನ್ನು ಬಿಟ್ಟು ಬೇರೆಯವರನ್ನು ಅಧಿಕಾರದಲ್ಲಿ ನೋಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇನ್ನು ಕಾಂಗ್ರೆಸ್ ಗೆ ನಾನು ಈ ವೇಳೆ ಚಾಲೇಂಜ್ ಮಾಡುತ್ತೇನೆ. ಗಾಂಧಿ ಕುಟುಂಬವನ್ನು ಹೊರತುಪಡಿಸಿ ಬೇರೆಯವರನ್ನು ಐದು ವರ್ಷಗಳ ಅವಧಿಗೆ ಎಐಸಿಸಿ ಅಧ್ಯಕ್ಷರನ್ನಾಗಿ ನೇಮಿಸಲಿ ಎಂದು ಹೇಳಿದ್ದಾರೆ. ಅಲ್ಲದೇ ನೆಹರು ಅವರು ನಿಜವಾಗಿಯೂ ಪ್ರಜಾಸತ್ತಾತ್ಮಕವಾದ ಪಕ್ಷವನ್ನು ಸ್ಥಾಪಿಸಿದ್ದಾರೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ಇದೆ ವೇಳೆ ಕಾಂಗ್ರೆಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕಾಂಗ್ರೆಸ್ ಮುಖಂಡರು ಚಾಯ್ ವಾಲ ಓರ್ವ ಹೇಗೆ ದೇಶದ ಪ್ರಧಾನಿಯಾದ ಎನ್ನುವ ಬಗ್ಗೆ ಇನ್ನೂ ಕೂಡ ಅವರಿಗೆ ಆಶ್ಚರ್ಯ ಕಾಡುತ್ತಿದೆ ಎಂದು ಹೇಳಿದ್ದಾರೆ.
ಚತ್ತೀಸ್ ಗಢದಲ್ಲಿ 2 ಹಂತದಲ್ಲಿ ಚುನಾವಣೆ ನಡೆಯುತ್ತಿದೆ. ನವೆಂಬರ್ 12 ರಂದು ಒಂದು ಹಂತದ ಚುನಾವಣೆ ನಡೆದಿದ್ದು, ನವೆಂಬರ್ 20 ರಂದು 2ನೇ ಹಂತದ ಚುನಾವಣೆ ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ