
ನವದೆಹಲಿ(ಫೆ.13): ಇಂದು ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನ ಮುಕ್ತಾಯವಾಗಿದ್ದು, ಈ ಮೂಲಕ 2014ರ ಲೋಕಸಭೆಯ ಕೊನೆಯ ಸದನ ಕಲಾಪ ಅಂತ್ಯ ಕಂಡಿದೆ.
ಈ ವೇಳೆ ಪ್ರಸಕ್ತ ಲೋಕಸಭೆಯ ತಮ್ಮ ಕೊನೆಯ ಭಾಷಣ ಮಾಡಿದ ಪ್ರಧಾನಿ ಮೋದಿ, ತಮ್ಮ ಸರ್ಕಾರದ ಕಾರ್ಯವೈಖರಿ ತಮಗೆ ತೃಪ್ತಿ ತಂದಿದೆ ಎಂದು ಹೇಳಿದರು.
ಕಳೆದ 5 ವರ್ಷಗಳಲ್ಲಿ ಭಾರತದ ಚಹರೆಯನ್ನು ಬದಲಿಸುವಲ್ಲಿ ನಾವು ಯಶಶ್ವಿಯಾಗಿದ್ದು, ಇದಕ್ಕಾಗಿ ನಾನು ಇಡೀ ಸದನಕ್ಕೆ ಧನ್ಯವಾದ ಸಲ್ಲಿಸಲು ಬಯಸುತ್ತೇನೆ ಎಂದು ನುಡಿದರು.
ಇನ್ನು ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕುರಿತು ವ್ಯಂಗ್ಯದ ಬಾಣ ಬಿಟ್ಟ ಪ್ರಧಾನಿ ಮೋದಿ, ನಾನು ಮೊದಲ ಬಾರಿಗೆ ಸಂಸತ್ತಿಗೆ ಪ್ರವೇಶ ಮಾಡಿದ್ದು, ನಾನು ಬಹಳಷ್ಟು ವಿಷಯಗಳನ್ನು ಕಲಿತೆ ಎಂದು ಹೇಳಿದರು. ವಿಶೇಷವಾಗಿ ಪ್ರೀತಿಯ ಅಪ್ಪುಗೆ ಮತ್ತು ಬಲವಂತದ ಅಪ್ಪುಗೆ ನಡುವಿನ ವ್ಯತ್ಯಾಸ ಏನೆಂದು ತಿಳಿದಿದ್ದು ಇಲ್ಲಿ ಬಂದ ಮೇಲೆಯೇ ಎಂದು ಮೋದಿ ಚುಚ್ಚಿದರು.
ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮಂಡನೆ ವೇಳೆ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ತಮ್ಮ ಭಾಷಣದ ಬಳಿಕ ಪ್ರಧಾನಿ ಮೋದಿ ಅವರತ್ತ ತೆರಳಿ ಅವರನ್ನು ಅಪ್ಪಿಕೊಂಡಿದ್ದರು. ಇದಕ್ಕೆ ಇಂದು ಪ್ರಧಾನಿ ವ್ಯಂಗ್ಯದ ಮೂಲಕ ಪ್ರತ್ಯುತ್ತರ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.