ದೆಹಲಿ ಮೆಟ್ರೋಗೆ ಮೋದಿ ಚಾಲನೆ

By Suvarna Web DeskFirst Published Dec 25, 2017, 2:04 PM IST
Highlights

ಪ್ರಧಾನಿ ನರೇಂದ್ರ ಮೋದಿ ಬೊಟಾನಿಕಲ್ ಗಾರ್ಡನ್ ಮೆಟ್ರೋ ಸ್ಟೇಷನ್'ಗೆ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲ ರಾಮ್ ನಾಯಕ್ ಉಪಸ್ಥಿತರಿದ್ದರು. ಉದ್ಘಾಟನೆ ಮಾಡಿದ ನಂತರ ಮೂವರು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಅಚ್ಚರಿ ಎಂದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್'ಗೆ ಆಹ್ವಾನವನ್ನೇ ನೀಡಿಲ್ಲ.

ನವದೆಹಲಿ (ಡಿ.25): ಪ್ರಧಾನಿ ನರೇಂದ್ರ ಮೋದಿ ಬೊಟಾನಿಕಲ್ ಗಾರ್ಡನ್ ಮೆಟ್ರೋ ಸ್ಟೇಷನ್'ಗೆ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ರಾಜ್ಯಪಾಲ ರಾಮ್ ನಾಯಕ್ ಉಪಸ್ಥಿತರಿದ್ದರು. ಉದ್ಘಾಟನೆ ಮಾಡಿದ ನಂತರ ಮೂವರು ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು. ಅಚ್ಚರಿ ಎಂದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್'ಗೆ ಆಹ್ವಾನವನ್ನೇ ನೀಡಿಲ್ಲ.

ದೆಹಲಿ ಹಾಗೂ ನೋಯ್ಡಾ ನಡುವೆ 12.64 ಕಿಮೀ ಅಂತರವಿದ್ದು ಬೊಟಾನಿಕಲ್ ಗಾರ್ಡನ್ ಮೆಟ್ರೋ ಕೇವಲ 45 ನಿಮಿಷಗಳಲ್ಲಿ ಇವೆರಡೂ ನಗರಗಳನ್ನು ಸೇರಿಸಲಿದೆ. ಇಂದು ಸಂಜೆ 5 ಗಂಟೆಯಿಂದ ಸಾರ್ವಜನಿಕರಿಗೆ ಮೆಟ್ರೋ ಸೌಲಭ್ಯ ಸಿಗಲಿದೆ.

ಪ್ರಧಾನಿ ಮೋದಿ ಆಗಮನದ ಹಿನ್ನಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಬೇರೆ ಬೇರೆ ರಾಜ್ಯಗಳಿಂದ ಭದ್ರತಾ ಸಿಬ್ಬಂದಿಗಳನ್ನು ಕರೆಸಿಕೊಳ್ಳಲಾಗಿತ್ತು. ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿತ್ತು.

 

click me!