
ಅಮೇಥಿ(ಮಾ.03): ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸ್ವಕ್ಷೇತ್ರ ಅಮೇಥಿಯಲ್ಲಿ ಕಲಾಶ್ನಿಕೋವ ರೈಫಲ್ಸ್ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ.
ಕಲಾಶ್ನಿಕೋವ್ ರೈಫಲ್ಸ್ ಘಟಕದಲ್ಲಿ ಅತ್ಯಾಧುನಿಕ ಎಕೆ-203 ರೈಫಲ್‌ಗಳನ್ನು ಉತ್ಪಾದಿಸಲಾಗುತ್ತಿದ್ದು, ಭಯೋತ್ಪಾದಕರು ಮತ್ತು ಮಾವೋವಾದಿಗಳ ವಿರುದ್ಧ ಹೋರಾಡಲು ನಮ್ಮ ಯೋಧರಿಗೆ ಹೊಸ ಶಕ್ತಿ ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕಾಂಗ್ರೆಸ್ ಭದ್ರಕೋಟೆಯಲ್ಲೇ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡ ಮೋದಿ, 2007ರಲ್ಲೇ ಈ ಕಾರ್ಖಾನೆಗೆ ಶಂಕುಸ್ಥಾಪನೆ ಮಾಡಿ 2010ರಲ್ಲಿ ಕಾಮಗಾರಿ ಆರಂಭವಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಅಂದಿನ ಸರ್ಕಾರ ಈ ಕಾರ್ಖಾನೆಯಲ್ಲಿ ಯಾವ ಬಗೆಯ ಆಯುಧವನ್ನು ಉತ್ಪಾದಿಸಬೇಕೆಂದೇ ನಿರ್ಧರಿಸಿರಲಿಲ್ಲ ಎಂದು ಟೀಕಿಸಿದರು.
ಭಾರತ ಮತ್ತು ರಷ್ಯಾದ ಜಂಟಿ ಸಹಭಾಗಿತ್ವದಲ್ಲಿ ಕೋರ್ವಾ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಈ ಆಯುಧವನ್ನು ತಯಾರಿಸಲಾಗುತ್ತಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಆತ್ಮೀಯ ಮಿತ್ರ ಎಂದು ಕರೆದ ಪ್ರಧಾನಿ ಮೋದಿ, ಪುಟಿನ್ ಅವರ ಸಹಕಾರದಿಂದ ಅತಿ ಶೀಘ್ರವಾಗಿ ಈ ಜಂಟಿ ಸಹಭಾಗಿತ್ವದ ಉದ್ಯಮ ಸಾಧ್ಯವಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.