ಕೊಚ್ಚಿ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ

Published : Jun 17, 2017, 08:59 PM ISTUpdated : Apr 11, 2018, 12:59 PM IST
ಕೊಚ್ಚಿ ಮೆಟ್ರೋ ಉದ್ಘಾಟಿಸಿದ ಪ್ರಧಾನಿ ಮೋದಿ

ಸಾರಾಂಶ

ಮೆಟ್ರೋ ರೈಲು ನಿಗಮ  23 ತೃತೀಯ ಲಿಂಗಿಗಳಿಗೆ ಉದ್ಯೋಗ ನೀಡಿ ದೇಶದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳನ್ನು ಕೆಲಸಕ್ಕೆ ನೇಮಿಸಿಕೊಂಡ ಮೊದಲ ಸರ್ಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೊಚ್ಚಿ : ಕೇರಳದ ಕೊಚ್ಚಿ ಜನತೆಯ ಮೆಟ್ರೋ ಕನಸು ಇಂದು ಸಾಕಾರಗೊಂಡಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೊಚ್ಚಿ ಮೆಟ್ರೋವನ್ನು ಇಂದು ಉದ್ಘಾಟಿಸಿ, 10.35ಕ್ಕೆ ಪಾಲರಿವಟ್ಟಂ ಸ್ಟೇಷನ್ ನಿಂದ ಹೊಸ ಮೆಟ್ರೋ ರೈಲಿನಲ್ಲಿ ಪ್ರಯಾಣ ಬೆಳೆಸಿದರು.

ಮೋದಿಗೆ ನಿವೃತ್ತ ನ್ಯಾಯಮೂರ್ತಿ ಪಿ.ಸದಾಶಿವಂ, ಮುಖ್ಯಮಂತ್ರಿ ಪಿನಾರಾಯ್ ವಿಜಯನ್, ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಅಧಿಕಾರಿಗಳು ಸಾಥ್ ನೀಡಿದರು.

ಇನ್ನೂ ಮೋದಿ ಪ್ರಯಾಣಿಸುವ ಮೆಟ್ರೋ ಬೋಗಿಯನ್ನು ಕೇರಳ ಮತ್ತು ಕೊಚ್ಚಿ ಸಂಸ್ಕೃತಿ ಬಿಂಬಿಸುವ ರೀತಿ ಸಿದ್ಧಗೊಳಿಸಲಾಗಿತ್ತು.

ಕೊಚ್ಚಿಯ ಗ್ರಾಮೀಣ ಸೊಗಡಿನ ರೂಪವನ್ನು ಈ ಬೋಗಿಯಲ್ಲಿ ನೋಡಬಹುದಾಗಿದೆ. ಇನ್ನು ಮೆಟ್ರೋ ರೈಲು ನಿಗಮ  23 ತೃತೀಯ ಲಿಂಗಿಗಳಿಗೆ ಉದ್ಯೋಗ ನೀಡಿ ದೇಶದಲ್ಲೇ ಮೊದಲ ಬಾರಿಗೆ ತೃತೀಯ ಲಿಂಗಿಗಳನ್ನು ಕೆಲಸಕ್ಕೆ ನೇಮಿಸಿಕೊಂಡ ಮೊದಲ ಸರ್ಕಾರಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ