
ಮನಮಾ(ಆ.25): ಬಹ್ರೇನ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿ, 200 ವರ್ಷಗಳ ಹಳೆಯ ಶ್ರೀಕೃಷ್ಣ ದೇವಾಲಯದ ಪುನರಾಭಿವೃದ್ಧಿಗೆ ಚಾಲನೆ ನೀಡಿದ್ದಾರೆ.
ಸುಮಾರು 4.2 ಮಿಲಿಯನ್ ಡಾಲರ್ ವೆಚ್ಚದಲ್ಲಿ ಶ್ರೀಕೃಷ್ಣ ದೇವಾಲಯದ ಪುನರಾಭಿವೃದ್ಧಿ ಯೋಜನೆಗೆ ಮೋದಿ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ, ಭಾರತ-ಬಹ್ರೇನ್ ನಡುವಿನ ಸುಮಧುರ ಭಾಂಧವ್ಯಕ್ಕೆ ಶ್ರೀಕೃಷ್ಣ ಮಂದಿರ ಸಾಕ್ಷಿಯಾಗಿದ್ದು, ಇದರ ಪುನರುತ್ಥಾನಕ್ಕೆ ಚಾಲನೆ ನೀಡಿದ್ದು ತಮ್ಮ ಸೌಭಾಗ್ಯ ಎಂದು ಹೇಳಿದರು.
ಬಹ್ರೇನ್‌ಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದು, ಮನಾಮಾದಲ್ಲಿರುವ ಶ್ರೀನಾಥಜೀ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ ಗಮನ ಸೆಳೆದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.