
ನವದೆಹಲಿ, (ಡಿ.12): ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈತರ ಸಾಲ ಮನ್ನಾ ಮಾಡಲು ಮುಂದಾಗಿದೆ.
ಲೋಕಸಭಾ ಚುನಾವಣೆಯ ದಿಕ್ಸೂಚಿ ಎನ್ನಲಾಗಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಇದ್ರಿಂದ ಎಚ್ಚೆತ್ತಿರುವ ಬಿಜೆಪಿ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಪೂರಕವಾಗಬಹುದೆಂಬ ಕಾರಣಕ್ಕೆ ಸಾಲ ಮನ್ನಾ ಮಾಡಲು ನಿರ್ಧರಿಸಿದೆ ಎನ್ನಲಾಗಿದೆ.
"
ರೈತರ ಸಾಲ ಮನ್ನಾ ಕ್ರಮಕ್ಕೆ ಆರ್'ಬಿಐ ಆಕ್ಷೇಪ
ಪಂಚ ರಾಜ್ಯಗಳಲ್ಲಿ ಬಿಜೆಪಿ ಸೋಲಿಗೆ ಪ್ರಮುಖ ಕಾರಣವೇನು ಎಂಬುವುದನ್ನ ನೋಡಿದಾಗ, ಪ್ರಮುಖವಾಗಿ ರೈತರ ಅಸಮಾಧಾನ ಎಂದು ತಿಳಿದುಬಂದಿದೆ. ಮತ್ತೊಂದೆಡೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಎಂದು ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು.
ಇದ್ರಿಂದ ಬಿಜೆಪಿ ಸೋಲಿಗೆ ಮುಖ್ಯ ಕಾರಣ ಎಂದು ಪಕ್ಷದ ನಾಯಕರು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಮೋದಿ ಅವರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ರೈತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ಈಗ ಪೂರಕ ಸಿದ್ಧತೆಗಳು ನಡೆಯುತ್ತಿದ್ದು, ಶೀಘ್ರದಲ್ಲೇ ಈ ಕುರಿತು ಆದೇಶ ಹೊರಬೀಳುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಈ ಹಿಂದೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಯಾವುದೇ ಕಾರಣಕ್ಕೂ ಸಾಲ ಮನ್ನಾ ಮಾಡುವುದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ