ತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ ಮೋದಿ; ಕರುಣಾನಿಧಿ ಭೇಟಿ

Published : Nov 06, 2017, 04:15 PM ISTUpdated : Apr 11, 2018, 01:07 PM IST
ತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ ಮೋದಿ; ಕರುಣಾನಿಧಿ ಭೇಟಿ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಇವತ್ತು ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ. ಚೆಪಾಕ್​​'ನ ಮದ್ರಾಸ್​ ವಿವಿಯಲ್ಲಿ 'ದಿನತಂತಿ ಪತ್ರಿಕೆ'ಯ ಅಮೃತ ಮಹೋತ್ಸವದಲ್ಲಿ ನರೇಂದ್ರ ಮೋದಿ ಭಾಗಿಯಾಗಿದರು.  ಅಚ್ಚರಿ ಅಂದ್ರೆ ಈ ಕಾರ್ಯಕ್ರಮದಲ್ಲಿ ನಟ ರಜನಿಕಾಂತ್​ ಕೂಡಾ ವೇದಿ ಮುಂಭಾಗದಲ್ಲಿ ಆಸೀನರಾಗಿದ್ದರು.  ರಜನಿಕಾಂತ್​ ಜೊತೆ ತಮಿಳು ನಟರಾದ ಸೂರ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.  

ಚೆನ್ನೈ (ನ.06): ಪ್ರಧಾನಿ ನರೇಂದ್ರ ಮೋದಿ ಇವತ್ತು ತಮಿಳುನಾಡು ಪ್ರವಾಸ ಕೈಗೊಂಡಿದ್ದಾರೆ. ಚೆಪಾಕ್​​'ನ ಮದ್ರಾಸ್​ ವಿವಿಯಲ್ಲಿ 'ದಿನತಂತಿ ಪತ್ರಿಕೆ'ಯ ಅಮೃತ ಮಹೋತ್ಸವದಲ್ಲಿ ನರೇಂದ್ರ ಮೋದಿ ಭಾಗಿಯಾಗಿದರು.  ಅಚ್ಚರಿ ಅಂದ್ರೆ ಈ ಕಾರ್ಯಕ್ರಮದಲ್ಲಿ ನಟ ರಜನಿಕಾಂತ್​ ಕೂಡಾ ವೇದಿ ಮುಂಭಾಗದಲ್ಲಿ ಆಸೀನರಾಗಿದ್ದರು.  ರಜನಿಕಾಂತ್​ ಜೊತೆ ತಮಿಳು ನಟರಾದ ಸೂರ್ಯ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.  

ಇದಕ್ಕೂ ಮುನ್ನ ತಮಿಳುನಾಡು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಾಜ್ಯದಲ್ಲಿನ ಭಾರಿ ಮಳೆ ಹಾಗೂ ಅದರಿಂದುಂಟಾದ ಪ್ರವಾಹ ಹಾಗೂ ಹಾನಿಗಳ ಕುರಿತು ಮಾಹಿತಿ ಪಡೆದಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡುವುದಾಗಿ ಮೋದಿ ಅವರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಚೆನ್ನೈ ಸೇರಿದಂತೆ ರಾಜ್ಯದಾದ್ಯಂತ ಹಲವೆಡೆ ಚಂಡಮಾರುತದಿಂದಾಗಿ ಒಂದು ಸುರಿದ ಮಳೆಗೆ 14ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಬಂಗಾಳಕೊಲ್ಲಿಯ ನೈರುತ್ಯ ಭಾಗ ಹಾಗೂ ಶ್ರೀಲಂಕಾ ಭಾಗದಲ್ಲಿ ಚಂಡಮಾರುತ ಬೀಸುತ್ತಿದ್ದರ ಪರಿಣಾಮ ಭಾರಿ ಮಳೆ ಬೀಳುತ್ತಿದೆ. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಮೋದಿ ಅವರು ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!
ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!