ಜನರನ್ನು ದಿಕ್ಕು ತಪ್ಪಿಸುತ್ತಿರುವ ಮೋದಿ: ಗುಂಡುರಾವ್ ಆಕ್ರೋಶ

Published : Nov 28, 2016, 07:18 AM ISTUpdated : Apr 11, 2018, 01:10 PM IST
ಜನರನ್ನು ದಿಕ್ಕು ತಪ್ಪಿಸುತ್ತಿರುವ ಮೋದಿ: ಗುಂಡುರಾವ್ ಆಕ್ರೋಶ

ಸಾರಾಂಶ

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ನೋಟು ನಿಷೇಧದಿಂದ ಸಾಮಾನ್ಯ ಜನತೆಗೆ ತೊಡಕಾಗಿದೆ ಹಾಗೂ ದೇಶದಲ್ಲಿ ಆರ್ಥಿಕ ನಿರ್ಬಂಧ ಉಂಟಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು (ನ.28): ಕೇಂದ್ರ ಸರ್ಕಾರದ ನೋಟು ಅಮಾನ್ಯ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಇಂದು ಆಕ್ರೋಶ ದಿನವನ್ನು ಆಚರಿಸಿದ್ದಾರೆ.

ಬೆಂಗಳೂರಿನ ಟೌನ್​ಹಾಲ್ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರದ ನೋಟು ನಿಷೇಧ ಕ್ರಮವನ್ನು ತೀವ್ರವಾಗಿ ಖಂಡಿಸಿದರು.

ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ ನೋಟು ನಿಷೇಧದಿಂದ ಸಾಮಾನ್ಯ ಜನತೆಗೆ ತೊಡಕಾಗಿದೆ ಹಾಗೂ ದೇಶದಲ್ಲಿ ಆರ್ಥಿಕ ನಿರ್ಬಂಧ ಉಂಟಾಗಿದೆ ಎಂದು ಹೇಳಿದ್ದಾರೆ.

ಜನ ಸಾಮಾನ್ಯರು ಕೆಲಸ ಬಿಟ್ಟು ಕ್ಯೂ ನಿಂತಿದ್ದಾರೆ, ಹಾಗೂ ಬಡಜನರು, ಕಾರ್ಮಿಕರು, ಉದ್ದಿಮೆದಾರರಿಗೆ ನಷ್ಟವಾಗಿದೆ. ಆದರೆ ಪ್ರಧಾನಿ ಮೋದಿ ಜನರನ್ನು ದಿಕ್ಕು ತಪ್ಪಿಸ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ನೂರು ದಿನದಲ್ಲಿ ವಿದೇಶದಲ್ಲಿರುವ ಕಪ್ಪಹಣ ತರುತ್ತೇವೆ ಎಂದಿದ್ದ ಮೋದಿ, ಎರಡೂವರೆ ವರ್ಷವಾದ್ರೂ ಕಪ್ಪು ಹಣ ತರಲಿಲ್ಲ, ಅದರ ಬದಲು ಜನರಿಗೆ ಕಷ್ಟ ಕೊಟ್ಟಿದ್ದಾರೆ ಎಂದು ಗುಂಡುರಾವ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನ ದಿಢೀರ್‌ ನೆಲಕ್ಕಪ್ಪಳಿಸಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿತು!
ಮಹಾರಾಷ್ಟ್ರ ಪಾಲಿನ ‘ಶಾಶ್ವತ ಡಿಸಿಎಂ’ ಅಜಿತ್‌ ದಾದಾ : 6 ಬಾರಿ ಡಿಸಿಎಂ ಹುದ್ದೆ