ತಿರುಪತಿಯಲ್ಲಿ ಮೋದಿ ಪೂಜೆ: ಪಕ್ಕದಲ್ಲಿ ಜಗನ್!

Published : Jun 09, 2019, 08:38 PM IST
ತಿರುಪತಿಯಲ್ಲಿ ಮೋದಿ ಪೂಜೆ: ಪಕ್ಕದಲ್ಲಿ ಜಗನ್!

ಸಾರಾಂಶ

ತಿರುಪತಿಯಲ್ಲಿ ಪ್ರಧಾನಿ ಮೋದಿಯಿಂದ ವಿಶೇಷ ಪೂಜೆ| ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ಮೋದಿಯಿಂದ ಪೂಜೆ| ಆಂಧ್ರದ ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ಭಾಗಿ| ತಿರುಪತಿಯಲ್ಲಿ ಬಿಜೆಪಿ ಸಭೆ ಉದ್ದೇಶಿಸಿ ಮೋದಿ ಭಾಷಣ| ‘ದೇಶಸೇವೆಗಾಗಿ ಜನತೆಯಿಂದ ಬಿಜೆಪಿಗೆ ಬಹುಮತ’|

ತಿರುಪತಿ(ಜೂ.09): ಶ್ರೀಲಂಕಾದಿಂದ ನೇರವಾಗಿ ಆಂಧ್ರಪ್ರದೇಶದ ತಿರುಪತಿಗೆ ಬಂದಿಳಿದ ಪ್ರಧಾನಿ ಮೋದಿ, ಇಲ್ಲಿನ ತಿರುಮಲ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ವಿಮಾನ ನಿಲ್ದಾಣದಿಂದ ನೇರವಾಗಿ ಬಿಜೆಪಿ ಬಹಿರಂಗ ಸಭೆಯಲ್ಲಿ ಭಾಗವಹಿಸಿದ ಪ್ರಧಾನಿ, ಬಳಿಕ ತಿರುಮಲ ದೇವಸ್ಥಾನಕ್ಕೆ ತರಳಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಪ್ರಧಾನಿ ಮೋದಿ ಅವರಿಗೆ ಆಂಧ್ರದ ನೂತನ ಸಿಎಂ ಜಗನ್ ಮೋಹನ್ ರೆಡ್ಡಿ ಸಾಥ್ ನೀಡಿದ್ದು ವಿಶೇಷವಾಗಿತ್ತು.

ಇದಕ್ಕೂ ಮೊದಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ರಾಜ್ಯಪಾಲ ESL ನರಸಿಂಹನ್, ಸಿಎಂ ಜಗನ್ ಮೋಹನ್ ರೆಡ್ಡಿ ಸೇರಿದಂತೆ ಆಂಧ್ರದ ಸಚಿವರ ದಂಡೇ ಸ್ವಾಗತಿಸಿತು.

ಬಳಿಕ ಬಿಜೆಪಿ ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ದೇಶಸೇವೆಗಾಗಿ ಜನತೆ ಬಿಜೆಪಿಗೆ ಚುನಾವಣೆಯಲ್ಲಿ ಬಹುಮತ ನೀಡಿದ್ದು, ಆಂಧ್ರವೂ ಸೇರಿದಂತೆ ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!