ಬಿಜೆಪಿ ಸಂಸದರಿಗೆ ಪ್ರಧಾನಿ ಕೇಳಿದ ಆ ಆರು ಪ್ರಶ್ನೆಗಳೇನು..?

Published : Dec 31, 2017, 10:20 AM ISTUpdated : Apr 11, 2018, 12:59 PM IST
ಬಿಜೆಪಿ ಸಂಸದರಿಗೆ ಪ್ರಧಾನಿ ಕೇಳಿದ ಆ ಆರು ಪ್ರಶ್ನೆಗಳೇನು..?

ಸಾರಾಂಶ

ಇತ್ತೀಚೆಗಷ್ಟೇ ಸಂಸದರ ಕಾರ್ಯನಿರ್ವಹಣೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಈಗ ತಮ್ಮ ಸರ್ಕಾರದ ಕಾರ್ಯಕ್ರಮಗಳು ನೆಲ ಮಟ್ಟದಲ್ಲಿ ಹೇಗೆ ಅನುಷ್ಠಾನಗೊಂಡಿವೆ ಹಾಗೂ ಅವುಗಳ ಬಗ್ಗೆ ಜನರ ಪ್ರತಿಕ್ರಿಯೆ ಏನು ಎಂದು ಬಯಸಿ ‘ನಮೋ ಆ್ಯಪ್’ ಮೂಲಕ ಬಿಜೆಪಿ ಸಂಸದರಿಗೆ 6 ಪ್ರಶ್ನೆಗಳನ್ನು ಕೇಳಿದ್ದಾರೆ.

ನವದೆಹಲಿ: ಇತ್ತೀಚೆಗಷ್ಟೇ ಸಂಸದರ ಕಾರ್ಯನಿರ್ವಹಣೆ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಈಗ ತಮ್ಮ ಸರ್ಕಾರದ ಕಾರ್ಯಕ್ರಮಗಳು ನೆಲ ಮಟ್ಟದಲ್ಲಿ ಹೇಗೆ ಅನುಷ್ಠಾನಗೊಂಡಿವೆ ಹಾಗೂ ಅವುಗಳ ಬಗ್ಗೆ ಜನರ ಪ್ರತಿಕ್ರಿಯೆ ಏನು ಎಂದು ಬಯಸಿ ‘ನಮೋ ಆ್ಯಪ್’ ಮೂಲಕ ಬಿಜೆಪಿ ಸಂಸದರಿಗೆ 6 ಪ್ರಶ್ನೆಗಳನ್ನು ಕೇಳಿದ್ದಾರೆ. ಈ ಪ್ರಶ್ನೆಗಳಿಗೆ ಜನವರಿ 11  ರೊಳಗೆ ಉತ್ತರಿಸಬೇಕು ಎಂದು ಸೂಚಿಸಿದ್ದಾರೆ.

ಸಂಸದರ ಉತ್ತರಗಳನ್ನು ಆಧರಿಸಿ ಯೋಜನೆ ಅನುಷ್ಠಾನದಲ್ಲಿ ಲೋಪಗಳಾಗಿವೆಯೇ ಎಂದು ತಿಳಿಯಲು ಹಾಗೂ ಲೋಪಗಳಾಗಿದ್ದರೆ ಅವುಗಳನ್ನು ತಿದ್ದಿಕೊಳ್ಳುವುದು ಮೋದಿ ಉದ್ದೇಶವಾಗಿದೆ. ಅಲ್ಲದೆ, ಸಂಸದರ ಕಾರ್ಯನಿರ್ವಹಣೆಯನ್ನೂ ಈ ಮೂಲಕ ಅಳೆಯಲು ಮೋದಿ ಉದ್ದೇಶ ಇರಿಸಿಕೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಯೊಂದು ಹೇಳಿದೆ.

*ನಿಮ್ಮ ಪ್ರದೇಶದಲ್ಲಿ ಯಾವ ಸರ್ಕಾರಿ ಯೋಜನೆಗಳು ಹೆಚ್ಚು ಪ್ರಭಾವ ಬೀರಿವೆ?

* ನಿಮ್ಮ ಪ್ರದೇಶದಲ್ಲಿ ಜಾರಿಯಾಗಿರುವ ಸರ್ಕಾರಿ ಯೋಜನೆಗಳನ್ನು ನೀವು ಹೇಗೆ ವಿಶ್ಲೇಷಿಸುವಿರಿ?

* ಫಲಾನುಭವಿಗಳೊಂದಿಗೆ ನೀವು ಸಂಪರ್ಕದಲ್ಲಿದ್ದೀರಾ? ಖುದ್ದಾಗಿ, ಇ-ಮೇಲ್ ಮೂಲಕ ಅಥವಾ ಎಸ್ಸೆಮ್ಮೆಸ್ ಮೂಲಕ?

* ಜನರ ಪ್ರತಿಕ್ರಿಯೆ ಅರಿಯಲು ಯಾವ ವಿಧಾನ ಸೃಷ್ಟಿಸಿದ್ದೀರಿ? ಪಕ್ಷಕ್ಕೆ ಪ್ರತಿಕ್ರಿಯೆ ಸಲ್ಲಿಸಿರುವಿರಾ?

* ನರೇಂದ್ರ ಮೋದಿ ಆ್ಯಪ್‌ನಲ್ಲಿ ಸರ್ಕಾರದ ಯೋಜನೆಗಳ ಎಲ್ಲ ಮಾಹಿತಿ ಇದೆಯೇ?

* ನೀವು ಏನಾದರೂ ಸಲಹೆ ನೀಡಬಯಸುವಿರಾ?

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಿಎಫ್ ಹಣ ಹಿಂಪಡೆಯುವ ನೀತಿಯಲ್ಲಿ 11 ಬದಲಾವಣೆ, EPFO 3.0 ನಿಯಮ ಜಾರಿ
ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?