
ನವದೆಹಲಿ(ಜ.11): ಗ್ಯಾಲಪ್ ಇಂಟರ್‌ನ್ಯಾಶನಲ್ ಸಂಸ್ಥೆ ನಡೆಸಿದ ಜನಪ್ರಿಯ ಜಾಗತಿಕ ನಾಯಕರ ಸಮೀಕ್ಷೆಯಲ್ಲಿ, ಪ್ರಧಾನಿ ನರೇಂದ್ರ ಮೋದಿಯ 3ನೇ ಸ್ಥಾನ ಪಡೆದಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಚೀನಾದ ಅಧ್ಯಕ್ಷ ಜಿನ್‌ಪಿಂಗ್‌ರನ್ನೂ ಹಿಂದಿಕ್ಕಿರುವ ಪ್ರಧಾನಿ ಮೋದಿ, ಜಾಗತಿಕ ಸಮೀಕ್ಷೆಯಲ್ಲಿ ಗಮನ ಸೆಳೆದಿದ್ದಾರೆ. ಜಗತ್ತಿನ ಜನಪ್ರಿಯ ನಾಯಕರಲ್ಲಿ ಜರ್ಮನ್ ಚಾನ್ಸಲರ್ ಏಂಜೆಲಾ ಮರ್ಕೆಲ್ ಮೊದಲ ಸ್ಥಾನದಲ್ಲಿದ್ದರೆ, ಫ್ರಾನ್ಸ್'ನ ನೂತನ ಪ್ರಧಾನಿ ಎಮ್ಯಾನುವೆಲ್ ಮ್ಯಾಕ್ರನ್ ಎರಡನೇ ಸ್ಥಾನದಲ್ಲಿದ್ದಾರೆ. ನಾಲ್ಕನೇ ಸ್ಥಾನದಲ್ಲಿ ಬ್ರಿಟನ್ ಪ್ರಧಾನಿ ಥೆರೆಸಾ ಮೇ, ಐದನೇ ಸ್ಥಾನದಲ್ಲಿ ಜಿನ್‌ಪಿಂಗ್, ಆರನೇ ಸ್ಥಾನದಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಇದ್ದಾರೆ. ಟ್ರಂಪ್ 11ನೇ ಸ್ಥಾನದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.