
ನವದೆಹಲಿ (ಏ.07): ಪ್ರಧಾನಿ ನರೇಂದ್ರ ಮೋದಿ ದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾರಿಗೆ ಸ್ವಾಗತ ನೀಡಿದರು. ಮೋದಿಯವರು ಪ್ರಧಾನ ಮಂತ್ರಿಯಾದ ಬಳಿಕ ಶೇಖ್ ಹಸೀನಾ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇವರ ಜೊತೆ ಬೃಹತ್ ಕೈಗಾರಿಕಾ ಸಚಿವ ಕೂಡಾ ಉಪಸ್ಥಿತರಿದ್ದಾರೆ.
ಶೇಖ್ ಹಸೀನಾ ಭಾರತದಲ್ಲಿ 4 ದಿನಗಳ ಕಾಲ ಪ್ರವಾಸ ಕೈಗೊಳ್ಳಲಿದ್ದು ನಾಗರೀಕ ಪರಮಾಣು ಸಹಕಾರ ಮತ್ತು ರಕ್ಷಣೆಗೆ ಸಂಬಂಧಿಸಿದಂತೆ 25 ಒಪ್ಪಂದಗಳಿಗೆ ಉಭಯ ರಾಷ್ಟ್ರಗಳು ಸಹಿ ಹಾಕಲಿವೆ.
ಬಹುಕಾಲದಿಂದ ಬಾಕಿಯಿರುವ ತೀಸ್ತಾ ನದಿ ನೀರು ಹಂಚಿಕೆ ವಿಚಾರದ ಬಗ್ಗೆ ಮಾತುಕತೆ ನಡೆಸಿ ಬಗೆಹರಿಸುವ ನಿರೀಕ್ಷೆಯಿದೆ. ಅದೇ ರೀತಿ ಭಯೋತ್ಪಾದನೆ, ಉಭಯ ದೇಶಗಳಲ್ಲಿ ಭದ್ರತಾ ಸಹಕಾರವನ್ನು ಹೆಚ್ಚಿಸುವ ಸಂಬಂಧ ಚರ್ಚೆ ನಡೆಸಲಿದ್ದಾರೆ. ಕಲ್ಕತ್ತಾ-ಕೌಲ್ನಾ ನಡುವೆ ಬಸ್ ಹಾಗೂ ರೈಲು ಸೇವೆಗೂ ಕೂಡಾ ಚಾಲನೆ ಸಿಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.