
ಪುದುಚೇರಿ: ನುಡಿದಂತೆ ನಡೆಯದ ಮತ್ತು ಸುಳ್ಳಿ ಸರ್ಕಾರ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ಕರ್ನಾಟಕದ ಬೆಳಗಾವಿಯಲ್ಲಿ ತೀವ್ರ ವಾಗ್ದಾಳಿ ನಡೆಸಿದ ಮಾರನೇ ದಿನವೇ, ಪುದುಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಪುದುಚೇರಿಯಲ್ಲಿ ಭಾನುವಾರ ಬಿಜೆಪಿ ಹಮ್ಮಿಕೊಂಡಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ‘ದೇಶವನ್ನು 48 ವರ್ಷಗಳ ಕಾಲ ಒಂದೇ ಕುಟುಂಬದ ಆಡಳಿತಕ್ಕೂ ಮತ್ತು ಎನ್‌ಡಿಎ ಸರ್ಕಾರ 48 ತಿಂಗಳ ಆಡಳಿತವನ್ನು ತುಲನೆ ಮಾಡಿ,’ ಎಂದು ಹೇಳುವ ಮೂಲಕ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಸರ್ಕಾರವನ್ನು ಪರೋಕ್ಷವಾಗಿ ಟೀಕಿಸಿದರು.
ಕಾಂಗ್ರೆಸ್ ನೇತೃತ್ವದ ಸರ್ಕಾರಗಳ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಆದ ಸಾಧನೆಗಳ ನಡುವಿನ ಅಂತರವನ್ನು ಬುದ್ಧಿ ಜೀವಿಗಳು ಚರ್ಚೆ ನಡೆಸಬಹುದಾಗಿದೆ. ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಸಾರಿಗೆ-ಸಂಪರ್ಕ, ಸಹಕಾರ ಸೇರಿದಂತೆ ಇತರ ಮೂಲಭೂತ ಸೌಲಭ್ಯಗಳು ಕಳಪೆ ಗುಣಮಟ್ಟದಲ್ಲಿದ್ದು, ಈ ಪ್ರದೇಶವು ‘ಕಾಂಗ್ರೆಸ್ ಸಂಸ್ಕೃತಿ’ಯ ಸಂತ್ರಸ್ತವಾಗಿದೆ ಎಂದು ಕಾಂಗ್ರೆಸ್ ಆಡಳಿತವನ್ನು ಕುಟುಕಿದ್ದಾರೆ ಮೋದಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.