ವಿಪಕ್ಷಗಳಿಗೆ ಧನ್ಯವಾದ ಹೇಳಿದ ಪ್ರಧಾನಿ ಮೋದಿ

By Web DeskFirst Published Aug 1, 2018, 12:47 PM IST
Highlights

ಪ್ರಧಾನಿ ನರೇಂದ್ರ ಮೋದಿ ಅವರು ಇದೀಗ ವಿರೋಧ ಪಕ್ಷಗಳಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ವಿಪಕ್ಷಗಳ ಟೊಳ್ಳುತ ನವನ್ನು ತೋರಿಸಿಕೊಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕಾಂಗ್ರೆಸ್‌ಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. 

ನವದೆಹಲಿ: ಲೋಕಸಭೆಯಲ್ಲಿ ತಮ್ಮ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿದ ಕಾಂಗ್ರೆಸ್ ಗೆ ಟಾಂಗ್ ನೀಡಿರುವ ಪ್ರಧಾನಿ ಮೋದಿ, ವಿಪಕ್ಷಗಳ ಟೊಳ್ಳುತ ನವನ್ನು ತೋರಿಸಿಕೊಡಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಕಾಂಗ್ರೆಸ್‌ಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ. 

ಸಂಸದೀಯ ಪಕ್ಷದ ಸಭೆಯ ವೇಳೆ ಮಾತನಾಡಿದ ಮೋದಿ, ಸಂಖ್ಯಾಬಲ ಇಲ್ಲದಿದ್ದರೂ ಅವಿಶ್ವಾಸಗೊತ್ತುವಳಿ ಮಂಡಿಸಿ ವಿಪಕ್ಷಗಳು ರಾಜಕೀಯ ಅಪಕ್ವತೆ ಪ್ರದರ್ಶಿಸಿವೆ. ವಿಪಕ್ಷಗಳಲ್ಲಿ ಹೊಂದಾಣಿಕೆ ಮತ್ತು ವಿಷಯದ ಕೊರತೆ ಇರುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ. 

ಇದೇ ವೇಳೆ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಸರ್ಕಾರ ಬಹುಮತ ಕಳೆದುಕೊಂಡಾಗ ಅಥವಾ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗಲಷ್ಟೇ ಅವಿಶ್ವಾಸ ಮಂಡಸಬೇಕು. ಆದರೆ, ಸರ್ಕಾರದ ವಿರುದ್ಧ ಅವಿಶ್ವಾಸಗೊತ್ತುವಳಿ ಮಂಡಿಸಲು ಕಾರಣವೇ ಇರಲಿಲ್ಲ ಎಂದು ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. 

click me!