ಜೂನ್ 15ಕ್ಕೆ ಎಲ್ಲಾ ಸಿಎಂ ಗಳ ಜೊತೆಗೆ ಪ್ರಧಾನಿ ಸಭೆ

Published : Jun 05, 2019, 12:22 PM IST
ಜೂನ್ 15ಕ್ಕೆ ಎಲ್ಲಾ ಸಿಎಂ ಗಳ ಜೊತೆಗೆ ಪ್ರಧಾನಿ ಸಭೆ

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಇದೇ ತಿಂಗಳ 15 ರಂದು ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜೂ. 15 ರಂದು ನಡೆಯಲಿರುವ ನೀತಿ ಆಯೋಗದ 5ನೇ ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಜಲ ನಿರ್ವಹಣೆ, ಕೃಷಿ ಮತ್ತು ರಕ್ಷಣೆಗೆ ಸಂಬಂಧಿಸಿ ಚರ್ಚಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಎರಡನೇ  ಅವಧಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ ನೀತಿ ಆಯೋಗದ ಸಭೆ ನಡೆಸುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ. 

ಕೌನ್ಸಿಲ್ ಸದಸ್ಯರು, ನೀತಿ ಆಯೋಗದ ಸದಸ್ಯರು, ಕೇಂದ್ರಾ ಡಳಿತ ಪ್ರದೇಶಗಳ ರಾಜ್ಯಪಾಲರು, ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಡೀ ಊರಿಗೆ ಊಟ ಹಾಕಿಸಿ ಎತ್ತಿನ ಹುಟ್ಟುಹಬ್ಬ ಆಚರಿಸಿದ ರೈತ; ಗ್ರಾಮದಲ್ಲಿ ಹಬ್ಬದ ವಾತಾವರಣ
ದೇಶದಲ್ಲೇ ಮೊದಲು, ಕೇರಳ ನಾಗರಿಕರಿಗೆ ನೇಟಿವಿಟಿ ಕಾರ್ಡ್! ವಿವಿಧ ಸೌಲಭ್ಯ ಪಡೆಯಲು ಚಾನ್ಸ್‌