ಆಜಾದ್‌ ಹಿಂದ್‌ ಸಂಭ್ರಮ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ!

Published : Oct 21, 2018, 09:58 AM ISTUpdated : Oct 21, 2018, 03:05 PM IST
ಆಜಾದ್‌ ಹಿಂದ್‌ ಸಂಭ್ರಮ: ಕೆಂಪು ಕೋಟೆಯಲ್ಲಿ ಮೋದಿ ಧ್ವಜಾರೋಹಣ!

ಸಾರಾಂಶ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಅಜಾದ್ ಹಿಂದ್ ಘೋಷಣೆಗೆ 75ನೇ ವರ್ಷಗಳ ಸಂಭ್ರಮ. ಈ ಸಂಭ್ರಮವನ್ನ ಇಮ್ಮಡಿಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದಾರೆ.

ನವದೆಹಲಿ(ಅ.21): ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕೆ ಬುನಾದಿ ಹಾಕಿಕೊಟ್ಟನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ‘ಆಜಾದ್‌ ಹಿಂದ್‌’ ಘೋಷಣೆಗೆ 75 ವರ್ಷ ತುಂಬಿದ ನೆನಪಿನಾರ್ಥವಾಗಿ (ಇಂದು) ಅ.21ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದ್ದಾರೆ.

"

 

 

ಈ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಕೊಡುಗೆ ನೀಡಿದ ಬೋಸ್‌ ಸ್ಮರಣೆ ಮಾಡಿದ್ದಾರೆ. ಭಾರತದಲ್ಲಿ ಬ್ರಿಟಿಷರ ಆಳ್ವಿಕೆ ಇದ್ದ ಹೊರಾತಾಗಿಯೂ, ಅದಕ್ಕೆ ಪ್ರತಿಯಾಗಿ ಬೋಸ್‌ ಅವರು, 1943ರ ಅಕ್ಟೋಬರ್‌ 21ರಂದು ದೇಶದ ಮೊದಲ ಸ್ವತಂತ್ರ ಭಾರತದ ರಚನೆ ಬಗ್ಗೆ ಘೋಷಣೆ ಮಾಡಿದ್ದರು. 

ಬ್ರಿಟಿಷರ ದಾಸ್ಯದಿಂದ ಭಾರತ ಹೊರಬಂದು ಸ್ವಾತಂತ್ರ್ಯ ಪಡೆಯಲು ಇದು ನಾಂದಿ ಹಾಡಿತು . ನೇತಾಜಿ ಸುಭಾಷ್ ಚಂದ್ರ ಬೋಸ್ ನಮಗೆ ಪ್ರೇರಣೆ ಎಂದು ಮೋದಿ ಹೇಳಿದರು. ಇದೇ ವೇಳೆ ನೇತಾಜಿ ಸುಭಾಷ್ ಚಂದ್ರ ಬೋಸ್ ಮ್ಯೂಸಿಯಂ ಸ್ಥಾಪನೆಗೆ ಶಿಲಾನ್ಯಾಸ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ