ಪ್ರಧಾನಿ ನರೇಂದ್ರ ಮೋದಿ ಮುಂದಿನ ಸೆಪ್ಟೆಂಬರ್ ನಲ್ಲಿ ಅಮೆರಿಕಾ ಪ್ರವಾಸ ಕೈಗೊಳ್ಳಲಿದ್ದು, ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.
ನವದೆಹಲಿ [ಜು.13]: ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ವಿಶ್ವ ಸಂಸ್ಥೆಯ ಸಾಮಾನ್ಯ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಸೆಪ್ಟೆಂಬರ್ ಮೂರನೇ ವಾರದಲ್ಲಿ ನ್ಯೂಯಾರ್ಕ್ ಹಾಗೂ ಹೂಸ್ಟನ್ ಪ್ರವಾಸ ಕೈಗೊಳ್ಳುವ ಮೋದಿ, ಟ್ರಂಪ್ ಆಡಳಿತದ ಜತೆ ದ್ವಿಪಕ್ಷೀಯ ಮಾತುಕತೆ ಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದೇ ವೇಳೆ ಹೂಸ್ಟನ್‌ನಲ್ಲಿ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ. ವಿಶ್ವಸಂಸ್ಥೆ ಯ ಸಾಮಾನ್ಯ ಅಧಿವೇಶನದಲ್ಲಿ ಮೋದಿ ಪಾಲ್ಗೊಳ್ಳೂತ್ತಿರುವುದು ಇದು 3 ನೇ ಬಾರಿ. 2017 ರಲ್ಲಿ ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಮೋದಿ ಅವರ ಮೊದಲ ಭೇಟಿ ಇದಾಗಿದೆ.
ಆದರೆ, ಮೋದಿ ಹಾಗೂ ಟ್ರಂಪ್ ಭೇಟಿಯ ಬಗ್ಗೆ ಇನ್ನೂ ಅಧಿಕೃತ ಹೇಳಿಕೆ ಹೊರ ಬಿದ್ದಿಲ್ಲ. ಅಮೆರಿಕ ಹಾಗೂ ಭಾರತದ ಮಧ್ಯೆ ವ್ಯಾಪಾರಿ ಕದನದ ವಿಚಾರವಾಗಿ ಮನಸ್ಥಾಪ ಏರ್ಪಟ್ಟಿರುವಾಗಲೇ ಮೋದಿ ಭೇಟಿ ಮಹತ್ವ ಪಡೆದುಕೊಂಡಿದೆ.