
ನವದೆಹಲಿ: ಫೇಸ್‌ಬುಕ್, ಟ್ವೀಟರ್‌ನಲ್ಲಿ ಅತಿ ಹೆಚ್ಚು ಹಿಂಬಾಲಕರ ಮೂಲಕ ಜಗತ್ತಿನ ಟಾಪ್ ನಾಯಕರಲ್ಲಿ ಗುರುತಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ಫೋಟೋ ಹಂಚಿಕೆ ತಾಣವಾದ ಇನ್ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಹಿಂಬಾಲಕರನ್ನು ಹೊಂದಿರುವ ಜಗತ್ತಿನ ನಂ.1 ನಾಯಕ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಮೋದಿ ಸದ್ಯ 69 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ಮೋದಿ 101 ಪೋಸ್ಟ್‌ಗಳನ್ನು ಮಾಡಿದ್ದಾರೆ. ಜೊತೆಗೆ ಈ ಫೋಟೋಗಳಿಗೆ ಬಂದಿರುವ ಅಭಿಪ್ರಾಯಗಳ ಆಧಾರದಲ್ಲಿ ಅವರು ಅತ್ಯಂತ ಪರಿಣಾಮಕಾರಿ ಜಾಗತಿಕ ನಾಯಕ ಎಂಬ ಹಿರಿಮೆಗೂ ಪಾತ್ರರಾಗಿದ್ದಾರೆ.
ವಿಶ್ವದ ವಿವಿಧ ದೇಶಗಳ 325 ಅಧ್ಯಕ್ಷರು, ಪ್ರಧಾನಿಗಳು, ವಿದೇಶಾಂಗ ಸಚಿವರ ಖಾತೆ ಪರಿಶೀಲಿಸಿ ಈ ಪಟ್ಟಿತಯಾರಿಸಲಾಗಿದೆ. 63 ಲಕ್ಷ ಹಿಂಬಾಲಕರೊಂದಿಗೆ ಟ್ರಂಪ್ 2 ಮತ್ತು 37 ಲಕ್ಷ ಹಿಂಬಾಲಕರೊಂದಿಗೆ ಪೋಪ್ ಫ್ರಾನ್ಸಿಸ್ 3ನೇ ಸ್ಥಾನದಲ್ಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.