
ಅಹಮದಾಬಾದ್(ಅ.31): ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಪ್ರಧಾನಿ ಮೋದಿ ಗುಜರಾತ್‌ನ ನರ್ಮದಾ ಜಿಲ್ಲೆಯ ಕೇವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪಟೇಲ್ ಅವರ 144ನೇ ಜನ್ಮ ಜಯಂತಿಯ ಅಂಗವಾಗಿ ಜನತೆಗೆ ಏಕತೆಯ ಪ್ರಮಾಣವಚನವನ್ನು ಮೋದಿ ಬೋಧಿಸಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ವಿವಿಧತೆಯಲ್ಲಿ ಏಕತೆ ನಮ್ಮ ದೇಶದ ಗುರುತಾಗಿದ್ದು ದೇಶದ ಈ ಏಕತೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರತಿಜ್ಞೆ ಮಾಡುವುದಾಗಿ ಘೋಷಿಸಿದರು.
ವಿವಿಧತೆಯಲ್ಲಿ ಏಕತೆಯೇ ಜೀವಾಳ: ಏಕತಾ ದಿವಸ್‌ನಲ್ಲಿ ಮೋದಿ!
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ದೂರದೃಷ್ಟಿಯ ಪರಿಣಾಮ ದೇಶ ಒಗ್ಗೂಡಿದ್ದು, 370ನೇ ವಿಧಿಯ ರದ್ದತಿಯ ಶ್ರೇಯವನ್ನು ಸರ್ದಾರ್ ಪಟೇಲ್ ಅವರಿಗೆ ಸಮರ್ಪಿಸುವುದಾಗಿ ಪ್ರಧಾನಿ ಮೋದಿ ಹೇಳಿದರು.
ದೇಶದ ಆಂತರಿಕ ಭದ್ರತೆಗೆ ನನ್ನಿಂದ ಸಾಧ್ಯವಾದ ಕೊಡುಗೆ ನೀಡುವುದಾಗಿ ಭರವಸೆ ನೀಡಿದ ಪ್ರಧಾನಿ, ದೇಶ ಹಿಂದೆಂದಿಗಿಂತಲೂ ಹೆಚ್ಚು ಬಲಿಷ್ಠವಾಗಿದೆ ಎಂದು ನುಡಿದರು. ಬಳಿಕ ಪ್ರಧಾಣಿ ಮೋದಿ ಏಕತಾ ಪ್ರತಿಮೆ ಬಳಿ ಇರುವ ಸರ್ದಾರ್ ಮ್ಯೂಸಿಯಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.