
ನವದೆಹಲಿ(ನ.09): ಅಯೋಧ್ಯೆ ತೀರ್ಪಿಗೆ ಕ್ಷಣಗಣನೆ ಶುರುವಾಗಿದೆ. ಸುಪ್ರೀಂಕೋರ್ಟ್ ಬೆಳಗ್ಗೆ 10-30ಕ್ಕೆ ತೀರ್ಪು ಪ್ರಕಟಿಸಲಿದೆ. ಇನ್ನು ತೀರ್ಪಿಗೂ ಮುನ್ನ ದೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ, ತೀರ್ಪನ್ನು ಗೆಲುವು, ಸೋಲಿನ ಅಳತೆಯಲ್ಲಿ ತೂಗಬಾರದು ಎಂದು ಮನವಿ ಮಾಡಿದ್ದಾರೆ.
ತೀರ್ಪು ಯಾರ ಪರವಾಗಿ ಬಂದರೂ ಅದು ದೇಶದ ಗೆಲುವು ಎಂದಿರುವ ಪ್ರಧಾನಿ ಮೋದಿ, ಸಾಮರಸ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.
ಅಯೋಧ್ಯೆ ತೀರ್ಪು ಸ್ವಾಗತಿಸಲು ರಾಷ್ಟ್ರ ರಾಜಧಾನಿ ಸಜ್ಜು
ಈ ಕುರಿತು ಸರಣಿ ಟ್ವಿಟ್ ಮಾಡಿರುವ ಪ್ರಧಾನಿ, ತೀರ್ಪಿನಿಂದಾಗಿ ಯಾರೂ ಗೆಲ್ಲುವುದಿಲ್ಲ, ಯಾರೂ ಸೋಲುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಯೋಧ್ಯೆ ತೀರ್ಪು: ವಿವಾದ ಇರುವುದೇ 2.77 ಎಕರೆ ಭೂಮಿಗಾಗಿ!
ಸಮಾಜದ ಸಾಮರಸ್ಯ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಸಹಬಾಳ್ವೆಯ ಸಿದ್ಧಾಂತಕ್ಕೆ ಧಕ್ಕೆ ಬರುವುದಿಲ್ಲ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ ಐತಿಹಾಸಿಕ ತೀರ್ಪು : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.