
ಬೆಳಗಾವಿ[ಅ.02]: ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಬ್ಯುಸಿ ಆಗಿದ್ದರು. ಹಾಗಾಗಿ ಪ್ರವಾಹ ಕುರಿತು ಮೋದಿ ಅವರಿಗೆ ಟ್ವೀಟ್ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳುವ ಮೂಲಕ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ವಿವಾದ ಸೃಷ್ಟಿಸಿದ್ದಾರೆ.
'ಬಿಹಾರಕ್ಕೆ ಮಿಡಿದ ಮೋದಿ 52 ಇಂಚಿನ ಎದೆ, ಕರ್ನಾಟಕ ವಿಚಾರದಲ್ಲಿ ಕಲ್ಲುಬಂಡೆ ಆಗಿದ್ದೇಕೆ?'
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರ ತಂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಕೇಂದ್ರಕ್ಕೆ ವರದಿ ಸಲ್ಲಿಸಿದೆ.
ಬ್ಯೂಟಿ ಆಫ್ ಡೆಮಾಕ್ರಸಿ! ಸೂಲಿಬೆಲೆಗೆ ಸಿಟಿ ರವಿ ಪ್ರತಿಕ್ರಿಯೆ
ಕೇಂದ್ರದ ಎನ್‌ಡಿಆರ್‌ಎಫ್ ಅನುದಾನ ಜಿಲ್ಲಾಧಿಕಾರಿ ಖಾತೆಯಲ್ಲಿದೆ. ಪ್ರವಾಹ ಪುನರ್ವಸತಿ ಕಾರ್ಯ ಭರದಿಂದ ಸಾಗಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.