
ನವದೆಹಲಿ(ಆ.08): ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಧಾನಿ ಮೋದಿ ಇಂದು ಸಂಜೆ 4 ಗಂಟೆಗೆ ಮಾಡಲಿದ್ದ ರೆಡಿಯೋ ಭಾಷಣವನ್ನು ರದ್ದುಗೊಳಿಸಿದ್ದಾರೆ. ಬದಲಾಗಿ ಇಂದು ಸಂಜೆ 8 ಗಂಟೆಗೆ ಪ್ರಧಾನಿ ಟಿವಿ ಪರದೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.
ಈ ಕುರಿತು ಖುದ್ದು ಪ್ರಧಾನಿ ಕಚೇರಿ ಸ್ಪಷ್ಟನೆ ನೀಡಿದ್ದು, ಇಂದು ಸಂಜೆ 8 ಗಂಟೆಗೆ ತಾವು ದೇಶವನ್ನುದ್ದೇಶಿಸಿ ಮಾತನಾಡಲಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಆದರೆ ರೆಡಿಯೋ ಭಾಷಣವನ್ನು ರದ್ದುಪಡಿಸಿದ್ದೇಕೆ ಎಂಬುದರ ಕುರಿತು ಸ್ಪಷ್ಟನೆ ನೀಡಿಲ್ಲ.
ಪ್ರಧಾನಿ ಮೋದಿ ಈ ಮೊದಲಿನ ರೆಡಿಯೋ ಭಾಷಣ ರದ್ದುಗೊಳಿಸಿದ್ದೇಕೆ ಎಂಬ ಪ್ರಶ್ನೆ ಉದ್ಭವಿಸಿದ್ದು, ಮೋದಿ ಇಂದು ಸಂಜೆ 8 ಗಂಟೆಗೆ ಏನು ಘೋಷಣೆ ಮಾಡಲಿದ್ದಾರೆ ಎಂಬ ಕುತೂಹಲ ಗರಿಗೆದರಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದತಿಯಿಂದಾಗಿ ದಿಕ್ಕೆಟ್ಟಿರುವ ಪಾಕಿಸ್ತಾನ, ಭಾರತದೊಂದಿಗಿನ ರಾಜತಾಂತ್ರಿಕ ಮತ್ತು ವಾಣಿಜ್ಯ ಸಂಬಂಧವನ್ನು ಕಡಿದುಕೊಂಡಿದೆ. ಅಲ್ಲದೇ ಭಾರತಕ್ಕೆ ಸಮ್ಜೋತಾ ಎಕ್ಸಪ್ರೆಸ್ ರೈಲು ಸೇವೆಯನ್ನೂ ಸ್ಥಗಿತಗೊಳಿಸಿದೆ.
ಈ ಹಿನ್ನೆಲೆಯಲ್ಲಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಲು ಪ್ರಧಾನಿ ಮೋದಿ ಯೋಜನೆ ರೂಪಿಸಿದ್ದಾರಾ ಎಂಬ ಕುತೂಹಲ ಮನೆ ಮಾಡಿದ್ದು, ಇಡೀ ದೇಶದ ಗಮನ ಮೋದಿ ಅವರ ಇಂದಿನ 8 ಗಂಟೆಯ ಭಾಷಣದ ಮೇಲೆ ನೆಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.