
ಬೆಂಗಳೂರು (ಅ.27): ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಆದರೆ ಈ ಭಾರಿ ಮೋದಿ ಯಾವುದೋ ರಾಜಕೀಯ ಸಮಾವೇಶದಲ್ಲಿ ಭಾಗವಹಿಸಲು ಬರುತ್ತಿಲ್ಲ. ಬದಲಾಗಿ ಸೌಂದರ್ಯಲಹರೀ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.
ಸಾರ್ವಜನಿಕರಿಗೆ ಸೌಂದರ್ಯಲಹರೀ ಪಾರಾಯಣವನ್ನು ಬೋಧಿಸುವ ದೃಷ್ಟಿಯಿಂದ ಇದೇ ಶನಿವಾರ ಮತ್ತು ಭಾನುವಾರದಂದು ಅರಮನೆ ಮೈದಾನದಲ್ಲಿ ಸೌಂದರ್ಯಲಹರೀ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿದೆ. ಮೊದಲನೇ ದಿನವಾದ ನಾಳೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹೆಚ್ಚಿನ ಆಧ್ಯತೆ ನೀಡಲಾಗಿದ್ದು, ಬೆಂಗಳೂರಿನ ಸುತ್ತಮುತ್ತಲಿರುವ 800 ಶಾಲೆಗಳಿಂದ ಒಟ್ಟು ಐವತ್ತು ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ನಾಳೆಯ ಕಾರ್ಯಕ್ರಮಕ್ಕೆ ಇಸ್ರೋ ಮುಖ್ಯಸ್ಥ ಶ್ರೀ.ಎ.ಎಸ್.ಕಿರಣ್ ಕುಮಾರ್ ಭಾಗವಹಿಲಿದ್ದಾರೆ ಎಂದು ಇಂದು ಅರಮನೆ ಮೈದಾನದಲ್ಲಿರುವ ಕೃಷ್ಣವಿಹಾರದಲ್ಲಿ ನಡೆದ ಪತ್ರಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ 2ನೇ ದಿನವಾದ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಂದು ಮಕ್ಕಳ ಜೊತೆ ವಯಸ್ಕರು ಕೂಡ ಪಾರಾಯಣದಲ್ಲಿ ಭಾಗವಹಿಸಬಹುದಾಗಿದೆ. ಮೋದಿ ಕಾರ್ಯಕ್ರಮಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಲಿದ್ದು, ಅವರು ಬರುವ ಮುಂಚೆ ಹಾಗೂ ಅವರು ಕಾರ್ಯಕ್ರಮದಿಂದ ನಿರ್ಗಮಿಸುವ ವರೆಗೂ ಸಾರ್ವಜನಿಕರು ಹೊರಗೆ ಹೋಗುವ ಅಥವಾ ಒಳಗಡೆ ಬರುವ ಅವಕಾಶ ಇರುವುದಿಲ್ಲ. ಇನ್ನು ಕಾರ್ಯಕ್ರಮದ ಹಿಂದಿನ ದಿನವಾದ ಇಂದು ಬೆಂಗಳೂರು ಪೋಲಿಸ್ ಕಮಿಷನರ್ ಸ್ಥಳ ಪರಿಶೀಲನೆ ನಡೆಸಿದರು.
2 ದಿನಗಳ ಕಾರ್ಯಕ್ರಮಕ್ಕೆ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಬೃಹತ್ ಸಂಖ್ಯೆಯ ಜನ ಪಾರಾಯಣಕರ್ತರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. 29 ರಂದು ಪ್ರಧಾನಿ ಭಾಗವಹಿಸುವ ಹಿನ್ನಲೆ ಸಾರ್ವಜನಿಕರು ಗುರುತಿನ ಚೀಟಿ ಪಡೆಯಬೇಕಾಗುತ್ತದೆ. ಜೊತೆಗೆ ಸ್ಥಳದಲ್ಲಿಯೂ ಗುರುತಿನ ಚೀಟಿ ವಿತರಿಸಲಾಗುತ್ತದೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.