ಪಾಕಿಸ್ತಾನ ಭಯೋತ್ಪಾದನೆಯ ಮಾತೃಭೂಮಿ

By Web DeskFirst Published Oct 16, 2016, 8:36 AM IST
Highlights

ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ. ಭಯೋತ್ಪಾದನೆ ವಿರುದ್ಧ ಬ್ರಿಕ್ಸ್ ರಾಷ್ಟ್ರಗಳು ಒಗ್ಗಟ್ಟಾಗಿ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ರಾಷ್ಟ್ರವನ್ನು ಶಿಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ಗೋವಾ(ಅ.16): ಭಯೋತ್ಪಾದನೆಯು ಜಾಗತಿಕ ಪಿಡುಗಾಗಿದ್ದು, ಭಯೋತ್ಪಾದನೆಗೆ ಪಾಕಿಸ್ತಾನ ಮಾತೃಭೂಮಿಯಾಗಿದೆ. ಭಯೋತ್ಪಾದನೆಯನ್ನು ನಾಶಮಾಡಲು ಬ್ರಿಕ್ಸ್ ರಾಷ್ಟ್ರಗಳು ಒಂದಾಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಗೋವಾದಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಮಾತನಾಡಿದ ಮೋದಿ, ಭಯೋತ್ಪಾದನೆಯನ್ನು ಪ್ರೋತ್ಸಾಹಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದಾರೆ. ಭಯೋತ್ಪಾದನೆ ವಿರುದ್ಧ ಬ್ರಿಕ್ಸ್ ರಾಷ್ಟ್ರಗಳು ಒಗ್ಗಟ್ಟಾಗಿ ಭಯೋತ್ಪಾದನೆಗೆ ಪ್ರೋತ್ಸಾಹಿಸುತ್ತಿರುವ ರಾಷ್ಟ್ರವನ್ನು ಶಿಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ಭಯೋತ್ಪಾದನೆಯನ್ನು ಪ್ರಚೋದಿಸುತ್ತಿರುವ ದೇಶ ನಮ್ಮ ನೆರೆರಾಷ್ಟ್ರವಾಗಿರುವುದು ನಮ್ಮ ದುರ್ದೈವ. ಪಾಕಿಸ್ತಾನ ಬರೀ ಭಯೋತ್ಪಾದನೆಗಷ್ಟೇ ಆಶ್ರಯ ನೀಡುತ್ತಿಲ್ಲ. ಬದಲಾಗಿ ರಾಜಕೀಯ ಲಾಭಕ್ಕಾಗಿ ಭಯೋತ್ಪಾದನೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಮೋದಿ ಪಾಕ್ ವಿರುದ್ಧ ಹರಿಹಾಯ್ದಿದ್ದಾರೆ.

click me!